ADVERTISEMENT

‘ಸಂಜು ವೆಡ್ಸ್‌...’ ಹಾಡಿನ ಚಿತ್ರೀಕರಣ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2024, 18:49 IST
Last Updated 26 ಏಪ್ರಿಲ್ 2024, 18:49 IST
ಚಿತ್ರತಂಡ
ಚಿತ್ರತಂಡ   

ನಾಗಶೇಖರ್‌ ನಿರ್ದೇಶನದ ‘ಸಂಜು ವೆಡ್ಸ್ ಗೀತಾ–2’ ನಾಲ್ಕನೇ ಹಂತದ ಚಿತ್ರೀಕರಣ ಪ್ರಾರಂಭಿಸಿದೆ. ಶ್ರೀನಗರ ಕಿಟ್ಟಿ, ರಚಿತಾ ರಾಮ್‌ ಜೋಡಿಯಾಗಿ ನಟಿಸುತ್ತಿರುವ ಚಿತ್ರದ ಹಾಡೊಂದರ ಅದ್ದೂರಿ ಚಿತ್ರೀಕರಣ ಇತ್ತೀಚೆಗಷ್ಟೇ ಕುಣಿಗಲ್‌ನಲ್ಲಿ ನಡೆದಿದೆ.

‘ಮೂರು ಹಂತಗಳ ಚಿತ್ರೀಕರಣ ಹಾಗೂ ಎಡಿಟಿಂಗ್ ಮುಗಿಸಿ ಡಬ್ಬಿಂಗ್‌ ಪ್ರಾರಂಭಿಸಿದ್ದೇವೆ. ಸ್ವಿಡ್ಜರ್ಲೆಂಡ್‌ನಲ್ಲಿ 15 ದಿನ ಹನ್ನೊಂದು ಜಾಗಗಳಲ್ಲಿ ಚಿತ್ರೀಕರಣ ಮಾಡಿದೆವು. ಶಿಡ್ಲಘಟ್ಟದ ರೇಷ್ಮೆಗೆ ದೊಡ್ಡ ಮಾರುಕಟ್ಟೆ ಇದೆ. ನಮ್ಮ ರೇಷ್ಮೆ ನೂಲಿಗೆ ಒಳ್ಳೆ ಬೆಲೆ ಬೇಕು ಎಂದು ಹೋರಾಡುವ ಇಬ್ಬರು ಪ್ರೇಮಿಗಳ ಕಥೆ ಈ ಚಿತ್ರದಲ್ಲಿದೆ. ಐದು ದಿನಗಳ ಕಾಲ ಹಾಡಿನ ಚಿತ್ರೀಕರಣ ನಡೆದಿದೆ. ಅದ್ದೂರಿ ಸೆಟ್‌ನಲ್ಲಿ ಹಾಡಿನ ಚಿತ್ರೀಕರಣಕ್ಕಾಗಿ ₹50 ಲಕ್ಷ ಖರ್ಚು ಮಾಡಿದ್ದೇವೆ’ ಎಂದರು ನಿರ್ದೇಶಕ ನಾಗಶೇಖರ್‌.

ಮಹಾನಂದಿ ಕ್ರಿಯೇಶನ್ಸ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ನಾಗಶೇಖರ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಸಂಗೀತ ನಿರ್ದೇಶಕ‌ ಶ್ರೀಧರ ವಿ. ಸಂಭ್ರಮ ಐದು ಹಾಡುಗಳಿಗೆ ಸಂಗೀತ ನೀಡಿದ್ದು, ಸೋನು ನಿಗಂ, ಶ್ರೇಯಾ ಘೋಷಾಲ್, ಮಂಗ್ಲಿ ಹಾಡಿದ್ದಾರೆ. ರಾಗಿಣಿ, ಚೇತನ್ ಚಂದ್ರ, ರಂಗಾಯಣ ರಘು, ಸಾಧು ಕೋಕಿಲ ವಿಶೇಷ ಪಾತ್ರಗಳಲ್ಲಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.