ಚಿಕ್ಕಣ್ಣ, ಗುರುನಂದನ್, ಅನೀಶ್ ತೇಜೇಶ್ವರ್, ರಂಗಾಯಣ ರಘು ಮೊದಲಾದವರು ತಾರಾಗಣದಲ್ಲಿರುವ ‘ಫಾರೆಸ್ಟ್’ ಚಿತ್ರದ ‘ಪೈಸಾ ಪೈಸಾ ಪೈಸಾ’ ಹಾಡು ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಸಾಹಸದ ಜೊತೆಗೆ ಹಾಸ್ಯಮತ ಕಥಾಹಂದರ ಹೊಂದಿರುವ ಚಿತ್ರವನ್ನು ಚಂದ್ರಮೋಹನ್ ನಿರ್ದೇಶಿಸಿದ್ದಾರೆ.
‘ಪೈಸಾ ಪೈಸಾ’ ಗೀತೆಗೆ ಚೇತನ್ ಕುಮಾರ್ ಸಾಹಿತ್ಯವಿದ್ದು, ಚಂದನ್ ಶೆಟ್ಟಿ ಹಾಡಿದ್ದಾರೆ. ಧರ್ಮವಿಶ್ ಸಂಗೀತ ನಿರ್ದೇಶನವಿದೆ. ‘ಕಾಡಿನಲ್ಲಿಯೇ ನಡೆಯುವ ಸಾಹಸಮಯ ಕಥೆಯಿದು. 2025ರ ಜನವರಿ 24ರಂದು ಚಿತ್ರ ತೆರೆಗೆ ಬರಲಿದೆ. ಈಗಾಗಲೇ ಬಿಡುಗಡೆಗೊಂಡಿರುವ ಟೀಸರ್, ಹಾಡುಗಳಿಗೆ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ’ ಎಂದಿದ್ದಾರೆ ನಿರ್ದೇಶಕರು.
ಶರಣ್ಯ ಶೆಟ್ಟಿ, ಅರ್ಚನಾ ಕೊಟ್ಟಿಗೆ ಚಿತ್ರದ ಪ್ರಮುಖ ಪಾತ್ರದಲ್ಲಿದ್ದಾರೆ. ಎನ್.ಎಂ.ಕಾಂತರಾಜ್ ಬಂಡವಾಳ ಹೂಡಿದ್ದು, ಆನಂದ್‌ರಾಜಾ ವಿಕ್ರಮ್ ಹಿನ್ನೆಲೆ ಸಂಗೀತ, ರವಿಕುಮಾರ್ ಛಾಯಾಚಿತ್ರಗ್ರಹಣ, ಅರ್ಜುನ್ ಕಿಟ್ಟು ಸಂಕಲನವಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.