ADVERTISEMENT

Sandalwood: ‘ಜಸ್ಟ್ ಮ್ಯಾರೀಡ್’ನ ಮತ್ತೊಂದು ಹಾಡು

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2025, 1:30 IST
Last Updated 4 ಆಗಸ್ಟ್ 2025, 1:30 IST
ಅಂಕಿತಾ ಅಮರ್
ಅಂಕಿತಾ ಅಮರ್   

ಅಂಕಿತಾ ಅಮರ್‌, ಶೈನ್‌ ಶೆಟ್ಟಿ ಜೋಡಿಯಾಗಿ ನಟಿಸಿರುವ ‘ಜಸ್ಟ್ ಮ್ಯಾರೀಡ್’ ಚಿತ್ರದ ‘ತಪ್ಪು ಮಾಡೋದು ಸಹಜ’ ಎಂಬ ಹಾಡು ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಸಿ.ಆರ್.ಬಾಬಿ ಬರೆದು ನಿರ್ದೇಶಿಸಿರುವ ಚಿತ್ರಕ್ಕೆ ಖ್ಯಾತ ಸಂಗೀತ ನಿರ್ದೇಶಕ ಅಜನೀಶ್‌ ಲೋಕನಾಥ್‌ ಬಂಡವಾಳ ಹೂಡಿದ್ದಾರೆ. 

ಅನನ್ಯಾ ಭಟ್ ಅವರ ಧ್ವನಿಯಲ್ಲಿ ಮೂಡಿಬಂದಿರುವ ಈ ಹಾಡಿಗೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದು, ಧನಂಜಯ್ ರಂಜನ್ ಸಾಹಿತ್ಯವಿದೆ. ಖ್ಯಾತ ನಿರ್ದೇಶಕ ಮತ್ತು ನಟ ರಾಜ್‌ ಬಿ ಶೆಟ್ಟಿ ಹಾಡು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. 

‘ಈಗಷ್ಟೇ ಮದುವೆಯಾದವರ ಕಥೆ. ಪ್ರೇಮಕಥೆಯ ಚಿತ್ರವಾಗಿದ್ದರೂ, ಪ್ರೇಕ್ಷಕರಿಗೆ ಬೇಕಾದ ಎಲ್ಲಾ ಅಂಶಗಳು ಇವೆ’ ಎಂದಿದ್ದಾರೆ ನಿರ್ದೇಶಕರು. ಅನುಪ್ ಭಂಡಾರಿ, ಸಾಕ್ಷಿ ಅಗರ್‌ವಾಲ್‌, ಶ್ರುತಿ ಹರಿಹರನ್, ದೇವರಾಜ್, ಅಚ್ಯುತ್ ಕುಮಾರ್, ಶ್ರುತಿ ಕೃಷ್ಣ, ಮತ್ತು ಶ್ರೀಮಾನ್ ಸೇರಿದಂತೆ ಸಾಕಷ್ಟು ಕಲಾವಿದರು ಚಿತ್ರದಲ್ಲಿ ನಟಿಸಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.