ಬಹುತೇಕ ಹೊಸಬರಿಂದಲೇ ಕೂಡಿರುವ ‘ಖದೀಮ’ ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಸಾಯಿ ಪ್ರದೀಪ್ ಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ.
‘ಸಣ್ಣ ಪ್ರಮಾಣದಲ್ಲಿ ಕಳ್ಳತನ ಮಾಡಿಕೊಂಡಿದ್ದ ಯುವಕನೊಬ್ಬ ಪ್ರೀತಿಯಲ್ಲಿ ಬಿದ್ದಾಗ, ಆತನ ಜೀವನದಲ್ಲಿ ಸಾಕಷ್ಟು ಬದಲಾವಣೆಗಳು ಆಗುತ್ತವೆ. ಬಳಿಕ ಆತನಿಂದ ಯಾರಿಗೆಲ್ಲ ಒಳಿತಾಗುತ್ತದೆ, ಸಮಾಜಕ್ಕೆ ಏನು ಕೊಡುಗೆ ನೀಡುತ್ತಾನೆ ಎಂಬುದೇ ಚಿತ್ರಕಥೆ. ಬೆಂಗಳೂರಿನ ಸಿಟಿ ಮಾರ್ಕೆಟ್‌ನಲ್ಲಿ ಬಹುಭಾಗ ಚಿತ್ರೀಕರಣ ಮಾಡಿದ್ದೇವೆ. ಇದೇ ತಿಂಗಳು ಚಿತ್ರ ತೆರೆಗೆ ಬರಲಿದೆ’ ಎಂದರು ನಿರ್ದೇಶಕರು.
ಶಿವೇಶು ಪ್ರೊಡಕ್ಷನ್ ಅಡಿಯಲ್ಲಿ ಅನಿವಾಸಿ ಭಾರತೀಯ ಟಿ.ಶಿವಕುಮಾರನ್ ಬಂಡವಾಳ ಹೂಡಿದ್ದಾರೆ. ನಟ ಚಂದನ್‌ಗೆ ಅನುಷಾ ಕೃಷ್ಣ ಜೋಡಿಯಾಗಿದ್ದಾರೆ. ಶೋಭರಾಜ್, ಗಿರಿಜಾ ಲೋಕೇಶ್, ಮುಖ್ಯಮಂತ್ರಿ ಚಂದ್ರು, ವಿ.ಮನೋಹರ್, ಯಶ್ ಶೆಟ್ಟಿ, ಮಿಮಿಕ್ರಿ ದಯಾನಂದ್ ಮುಂತಾದವರು ನಟಿಸಿದ್ದಾರೆ. ಶಶಾಂಕ್ ಶೇಷಗಿರಿ ಸಂಗೀತ ಸಂಯೋಜಿಸಿದ್ದಾರೆ. ನಾಗಾರ್ಜುನ.ಆರ್.ಡಿ ಛಾಯಾಚಿತ್ರಗ್ರಹಣ, ಉಮೇಶ್.ಆರ್.ಬಿ ಸಂಕಲನವಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.