‘ಬಘೀರ’ ಚಿತ್ರದ ಯಶಸ್ಸಿನ ಬೆನ್ನಲ್ಲೇ ನಟ ಶ್ರೀಮುರಳಿ ಅವರ ಹೊಸ ಪ್ರಾಜೆಕ್ಟ್ ಘೋಷಣೆಯಾಗಿದೆ. ಹಾಲೇಶ್ ಕೋಗುಂಡಿ ಆ್ಯಕ್ಷನ್ ಕಟ್ ಹೇಳಲಿರುವ ‘ಪರಾಕ್’ ಸಿನಿಮಾ 2025ರ ಮಾರ್ಚ್‌ನಲ್ಲಿ ಸೆಟ್ಟೇರಲಿದ್ದು, ಡಿಸೆಂಬರ್‌ನಲ್ಲಿ ತೆರೆಕಾಣಲಿದೆ.
ಇತ್ತೀಚೆಗೆ ಚಿತ್ರದ ಹೊಸ ಪೋಸ್ಟರ್ ಬಿಡುಗಡೆಯಾಗಿದೆ. ಒಂದು ಕೈಯಲ್ಲಿ ಗನ್ ಹಿಡಿದು ನಡೆಯುತ್ತಿರುವ ಶ್ರೀಮುರಳಿ ಬೆನ್ನಿಗೆ ಸ್ನೈಪರ್ ಹಾಕಿಕೊಂಡು ಪ್ರೇಕ್ಷಕರೆದುರಿಗೆ ಬಂದಿದ್ದಾರೆ. ಒಂದಷ್ಟು ಕಿರುಚಿತ್ರಗಳನ್ನು ನಿರ್ದೇಶಿಸಿರುವ ಅನುಭವವಿರುವ ಹಾಲೇಶ್‌ಗೆ ‘ಪರಾಕ್’ ಸಿನಿಮಾ ನಿರ್ದೇಶಕರಾಗಿ ಮೊದಲ ಹೆಜ್ಜೆ. ದೊಡ್ಡ ಬಜೆಟ್ ಸಿನಿಮಾ ಇದಾಗಿದ್ದು ದೊಡ್ಡ ತಾರಾಗಣವಿರಲಿದೆ ಎಂದು ಚಿತ್ರತಂಡ ತಿಳಿಸಿದೆ. ಬ್ರ್ಯಾಂಡ್ ಸ್ಟುಡಿಯೋಸ್ ಬ್ಯಾನರ್‌ನಡಿ ಈ ಸಿನಿಮಾ ನಿರ್ಮಾಣವಾಗುತ್ತಿದೆ. ಹಾಲೇಶ್‌ಗೆ ಮಂಜುನಾಥ್ ಬರವಣಿಗೆಯಲ್ಲಿ ಜೊತೆಯಾಗಿದ್ದಾರೆ. ಆ್ಯಕ್ಷನ್ ಸಸ್ಪೆನ್ಸ್ ಥ್ರಿಲ್ಲರ್ ಜಾನರ್‌ನಲ್ಲಿ ಈ ಸಿನಿಮಾವಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.