ADVERTISEMENT

ರಾಜ್‌ ವಿಜಯ್‌ ನಿರ್ದೇಶನದ 'ಗ್ರೀನ್' ಸಿನಿಮಾ ಶೀಘ್ರದಲ್ಲೇ ತೆರೆಗೆ

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2025, 23:30 IST
Last Updated 28 ಏಪ್ರಿಲ್ 2025, 23:30 IST
ಗೋಪಾಲಕೃಷ್ಣ ದೇಶಪಾಂಡೆ 
ಗೋಪಾಲಕೃಷ್ಣ ದೇಶಪಾಂಡೆ    

ರಾಜ್‌ ವಿಜಯ್‌ ನಿರ್ಮಾಣ ಹಾಗೂ ನಿರ್ದೇಶನದ ‘ಗ್ರೀನ್‌’ ಚಿತ್ರ ಶೀಘ್ರದಲ್ಲೇ ತೆರೆಗೆ ಬರಲಿದೆ. ಚಿತ್ರದ ಟೀಸರ್‌ ಇತ್ತೀಚೆಗೆ ಬಿಡುಗಡೆಯಾಗಿದ್ದು, ಗೋಪಾಲಕೃಷ್ಣ ದೇಶಪಾಂಡೆ, ಬಾಲಾಜಿ ಮನೋಹರ್ ಸಿನಿಮಾದ ಮುಖ್ಯಭೂಮಿಕೆಯಲ್ಲಿದ್ದಾರೆ.

ರಾಜ್‌ ವಿಜಯ್‌ ನಿರ್ದೇಶನದ ಚೊಚ್ಚಲ ಸಿನಿಮಾ ಇದಾಗಿದೆ. ‘ಕನ್ನಡದಲ್ಲಿ ಅಪರೂಪ ಎನ್ನಬಹುದಾದ ಸೈಕಾಲಜಿಕಲ್‌ ಥ್ರಿಲ್ಲರ್ ಕಥಾಹಂದರವನ್ನು ಸಿನಿಮಾ ಹೊಂದಿದೆ. ತನ್ನ ಇಡೀ ಜೀವನವನ್ನೇ ನಿಯಂತ್ರಿಸುತ್ತಿರುವ ತನ್ನೊಳಗಿನ ರಾಕ್ಷಸನಿಂದ ಹೊರಬರಲು ಹೊರಡುವ ನಾಯಕನ ಕಥೆಯೇ ಇದು. ಇದೊಂದು ಕಾಡಿನಲ್ಲಿ ನಡೆಯುವ ಕಥೆಯಾಗಿದ್ದು, ಊಟಿ ಬಳಿಯಲ್ಲಿ ಹೆಚ್ಚಿನ ಚಿತ್ರೀಕರಣ ಮಾಡಲಾಗಿದೆ. ಪ್ರತಿಷ್ಠಿತ ಚಿತ್ರೋತ್ಸವಗಳಲ್ಲಿ ಈ ಸಿನಿಮಾ ಪ್ರದರ್ಶನ ಕಂಡಿದೆ. ರವಿ ಫಿಲಂಸ್‌ನ ಮನೋಜ್ ಸದ್ಯದಲ್ಲೇ ಈ ಚಿತ್ರವನ್ನು ರಾಜ್ಯದಾದ್ಯಂತ ಬಿಡುಗಡೆ ಮಾಡಲಿದ್ದಾರೆ’ ಎಂದರು ರಾಜ್‌ ವಿಜಯ್‌. 

‘ಕನ್ನಡದಲ್ಲಿ ತೀರ ಅಪರೂಪದ ಕಥೆ ಇದಾಗಿದೆ ಹಾಗೂ ನಾನು ಕೂಡ ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ’ ಎಂದರು ಗೋಪಾಲಕೃಷ್ಣ ದೇಶಪಾಂಡೆ. ಬಿ.ಎನ್‌.ಸ್ವಾಮಿ ಈ ಚಿತ್ರದ ನಿರ್ಮಾಣಕ್ಕೆ ಕೈಜೋಡಿಸಿದ್ದಾರೆ. ಆರ್.ಜೆ. ವಿಕ್ಕಿ, ಶಿವ ಮಂಜು, ವಿಶ್ವನಾಥ್, ಡಿಂಪಿ ಪಾದ್ಯ ಚಿತ್ರದ ತಾರಾಬಳಗದಲ್ಲಿದ್ದಾರೆ. ಮಧುಸೂದನ್‌ ಛಾಯಾಚಿತ್ರಗ್ರಹಣ, ಶಕ್ತಿ ಸ್ಯಾಕ್‌ ಸಂಗೀತ ನಿರ್ದೇಶನ ಚಿತ್ರಕ್ಕಿದೆ. 

ADVERTISEMENT
ರಾಜ್‌ ವಿಜಯ್‌ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.