ADVERTISEMENT

ಟೈಗರ್ ಟಾಕೀಸ್; ಶೀರ್ಷಿಕೆಯಲ್ಲೇ ಅಬ್ಬರಿಸುತ್ತಿದ್ದಾನೆ ‘ಲಂಕಾಸುರ’

ವಿನೋದ್ ಪ್ರಭಾಕರ್ ನಟನೆಯ ಹೊಸ ಸಿನಿಮಾ

​ಪ್ರಜಾವಾಣಿ ವಾರ್ತೆ
Published 24 ಜುಲೈ 2022, 8:27 IST
Last Updated 24 ಜುಲೈ 2022, 8:27 IST
ವಿನೋದ್‌ ಪ್ರಭಾಕರ್‌
ವಿನೋದ್‌ ಪ್ರಭಾಕರ್‌   

ಟೈಗರ್ ಟಾಕೀಸ್ ಬ್ಯಾನರ್‌ ಅಡಿ ವಿನೋದ್ ಪ್ರಭಾಕರ್ ನಟನೆ, ನಿರ್ಮಾಣದ ಚಿತ್ರ ‘ಲಂಕಾಸುರ’ ಚಿತ್ರದ ಶೀರ್ಷಿಕೆ ಗೀತೆ ಬಿಡುಗಡೆಯಾಗಿ ಭರ್ಜರಿ ಸದ್ದು ಮಾಡುತ್ತಿದೆ.

‘ಅಣ್ಣ ಗನ್ ಹಿಡ್ದು ನಿಂತ ಅಂದ್ರೆ ಭಸ್ಮಾಸುರ.
ಲಾಂಗ್ ಹಿಡ್ದು ನಡ್ಕೊಂಡು ಬಂದ್ರೆ ಲಂಕಾಸುರ.
ಲಂಕಾಸುರ ಲಂಕಾಸುರ ...’

ಈ ಹಾಡಿಗೆ ವೀಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.ಚಿತ್ರದ ಸಂಗೀತ ನಿರ್ದೇಶಕ ವಿಜೇತ್ ಕೃಷ್ಣ ಅವರೆ ಈ ಹಾಡನ್ನು ಹಾಡಿದ್ದಾರೆ. ಜೋಯೆಲ್ ಶಾಸ್ತ್ರಿ ಗಿಟಾರ್ ನುಡಿಸಿದ್ದಾರೆ. ಮೋಹನ್ ಕುಮಾರ್ ನೃತ್ಯ ನಿರ್ದೇಶನ ಮಾಡಿರುವ ಈ ಹಾಡಿನಲ್ಲಿ ನಾಯಕ ವಿನೋದ್ ಪ್ರಭಾಕರ್ ಅಭಿನಯಿಸಿದ್ದಾರೆ. ಎಚ್.ಎಂ.ಟಿ., ಟೊರಿನೊ ಫ್ಯಾಕ್ಟರಿ ಹಾಗೂ ಮಲ್ಲೇಶ್ವರಂ ಧೋಬಿ ಘಾಟ್ ನಲ್ಲಿ ನಿರ್ಮಿಸಲಾಗಿದ್ದ ಅದ್ದೂರಿ ಆರು ಸೆಟ್ ಗಳಲ್ಲಿ ಈ ಹಾಡಿನ ಚಿತ್ರೀಕರಣ ನಡೆದಿದೆ.

ADVERTISEMENT

ಇದುಟೈಗರ್ ಟಾಕೀಸ್ ಸಂಸ್ಥೆಯ ಮೊದಲ ಚಿತ್ರವೂ ಹೌದು. ನಿಶಾ ವಿನೋದ್ ಪ್ರಭಾಕರ್ ಈ ಚಿತ್ರದ ನಿರ್ಮಾಪಕರು. ಪ್ರಮೋದ್ ಕುಮಾರ್ ನಿರ್ದೇಶಕರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.