ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಜೋಡಿ
ಬೆಂಗಳೂರು: ಸ್ಯಾಂಡಲ್‌ವುಡ್ ಸ್ಟಾರ್ ಜೋಡಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ದಂಪತಿಗೆ ಗಂಡು ಮಗು ಜನಿಸಿದೆ.
ನಿನ್ನೆ (ಜನವರಿ 26) ಗಂಡು ಮಗುವಿಗೆ ಜನ್ಮ ನೀಡಿರುವ ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ವಿವಾಹ ವಾರ್ಷಿಕೋತ್ಸವ ದಿನದಂದೇ ಮಗು ಜನಿಸಿದ್ದು, ಮೂರು ಸಿಂಹಗಳಿರುವ ಚಿತ್ರವನ್ನು ಜೋಡಿ ಹಂಚಿಕೊಂಡಿದೆ. ಕುಟುಂಬಕ್ಕೆ ಹೊಸ ಸದಸ್ಯನ ಆಗಮನವಾಗಿದೆ ಎಂದು ತಿಳಿಸಿದ್ದಾರೆ.
ಜೋಡಿಗೆ ಅಭಿಮಾನಿಗಳು ಶುಭ ಕೋರಿದ್ದಾರೆ.
ಇತ್ತೀಚೆಗಷ್ಟೇ ಹರಿಪ್ರಿಯಾ ಅವರ ಸೀಮಂತ ಕಾರ್ಯಕ್ರಮವನ್ನು ಅದ್ದೂರಿಯಾಗಿ ಮಾಡಲಾಗಿತ್ತು.
2023ರ ಜನವರಿ 26ರಂದು ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.