ADVERTISEMENT

ರಾಘವೇಂದ್ರ ಚಿತ್ರವಾಣಿ: ಅಶ್ವಿನಿ ಪುನೀತ್ ರಾಜಕುಮಾರ್‌ಗೆ ವಿಶೇಷ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 19 ಜನವರಿ 2023, 22:48 IST
Last Updated 19 ಜನವರಿ 2023, 22:48 IST
.
.   

ಬೆಂಗಳೂರು: ಕನ್ನಡ ಚಲನಚಿತ್ರ ಪ್ರಚಾರ ಸಂಸ್ಥೆ ಶ್ರೀರಾಘವೇಂದ್ರ ಚಿತ್ರವಾಣಿಯ 25ನೇ ವಾರ್ಷಿಕ ಪ್ರಶಸ್ತಿ ಪ್ರಕಟವಾಗಿವೆ. 2021 ಮತ್ತು 2022ನೇ ಸಾಲಿನ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ.

ಸಂಸ್ಥೆಯ ಸಂಸ್ಥಾಪಕ ದಿವಂಗತ ಡಿ.ವಿ. ಸುಧೀಂದ್ರ ಅವರ ಜನ್ಮದಿನವಾದ ಜ. 25ರಂದು ಈ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಾಮರಾಜಪೇಟೆಯ ಕನ್ನಡ ಚಲನಚಿತ್ರ ಕಲಾವಿದರ ಸಂಘದಲ್ಲಿ ಅಂದು ಸಂಜೆ 5ಕ್ಕೆ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಮುಖ್ಯಸ್ಥ ಸುಧೀಂದ್ರ ವೆಂಕಟೇಶ್‌ ತಿಳಿಸಿದ್ದಾರೆ.

ಪ್ರಶಸ್ತಿ ವಿವರ: 2021ನೇ ಸಾಲಿನ ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ: ಪಿ. ಧನರಾಜ್ (ಹಿರಿಯ ನಿರ್ಮಾಪಕ), ಈಶ್ವರ ದೈತೋಟ (ಹಿರಿಯ ಪತ್ರಕರ್ತ)

ADVERTISEMENT

2022ನೇ ಸಾಲಿನ ಪ್ರಶಸ್ತಿ: ಕುಮಾರ ಗೋವಿಂದ್‌ (ನಟ, ನಿರ್ಮಾಪಕ), ಸದಾಶಿವ ಶೆಣೈ (ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ), ರಾಜೇಶ್ ಕೃಷ್ಣನ್ (ಹಿನ್ನೆಲೆ ಗಾಯಕ– ಡಾ.ರಾಜ್‌ಕುಮಾರ್‌ ಪ್ರಶಸ್ತಿ), ಸಾಯಿಪ್ರಕಾಶ್‌ ಹಿರಿಯ ನಿರ್ದೇಶಕ, ನಿರ್ಮಾಪಕ (ಆರ್. ಶೇಷಾದ್ರಿ ಸ್ಮರಣಾರ್ಥ ಪ್ರಶಸ್ತಿ), ತುಳಸಿ (ಹಿರಿಯ ನಟಿ. ಇವರಿಗೆ ನಟಿ ಡಾ. ಜಯಮಾಲಾ ಎಚ್.ಎಂ.ರಾಮಚಂದ್ರ ಪ್ರಶಸ್ತಿ), ನೋಬಿನ್ ಪಾಲ್ (ಅತ್ಯುತ್ತಮ ಸಂಗೀತ ನಿರ್ದೇಶನ, ‘777 ಚಾರ್ಲಿ’ ಚಿತ್ರಕ್ಕಾಗಿ ಎಂ.ಎಸ್. ರಾಮಯ್ಯ ಮೀಡಿಯಾ ಅಂಡ್ ಎಂಟರ್ಟೈನ್ಮೆಂಟ್ ಪ್ರೈ ಲಿ. ಪ್ರಶಸ್ತಿ), ಮಧುಚಂದ್ರ (ಅತ್ಯುತ್ತಮ ಕಥಾಲೇಖಕರು, ‘ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ’ ಚಿತ್ರಕ್ಕಾಗಿ ನಿರ್ದೇಶಕ-ನಿರ್ಮಾಪಕ ಕೆ.ವಿ.ಜಯರಾಂ ಪ್ರಶಸ್ತಿ), ಎಂ.ಜಿ. ಶ್ರೀನಿವಾಸ್ (ಶ್ರೀನಿ) (ಅತ್ಯುತ್ತಮ ಸಂಭಾಷಣೆ, ‘ಓಲ್ಡ್ ಮಾಂಕ್’ ಚಿತ್ರಕ್ಕಾಗಿ ಚಿತ್ರಸಾಹಿತಿ ಹುಣಸೂರು ಕೃಷ್ಣಮೂರ್ತಿ ಸ್ಮರಣಾರ್ಥ), ಕಿರಣ್ ರಾಜ್ (‘777 ಚಾರ್ಲಿ’ ಚೊಚ್ಚಲ ಚಿತ್ರದ ನಿರ್ದೇಶನಕ್ಕಾಗಿ ಹಿರಿತೆರೆ-ಕಿರುತೆರೆ ನಿರ್ದೇಶಕ ಬಿ. ಸುರೇಶ ಪ್ರಶಸ್ತಿ), ಪ್ರಮೋದ್ ಮರವಂತೆ (‘ಕಾಂತಾರ’ ಚಿತ್ರದ ‘ಸಿಂಗಾರ ಸಿರಿಯೇ ...’ ಗೀತರಚನೆಗಾಗಿ ಹಿರಿಯ ಪತ್ರಕರ್ತ ಪಿ.ಜಿ. ಶ್ರೀನಿವಾಸಮೂರ್ತಿ ಅವರ ಸ್ಮರಣಾರ್ಥ ಪ್ರಶಸ್ತಿ), ಶ್ರೀನಿವಾಸಮೂರ್ತಿ (ಹಿರಿಯ ಪೋಷಕ ಕಲಾವಿದರು, ಹಿರಿಯ ಪತ್ರಕರ್ತ ಸಿ. ಸೀತಾರಾಂ ಸ್ಮರಣಾರ್ಥ ಪ್ರಶಸ್ತಿ).

ವಿಶೇಷ ಪ್ರಶಸ್ತಿ
ರಾಘವೇಂದ್ರ ಚಿತ್ರವಾಣಿಯಿಂದ ಮೂವರು ಸಾಧಕರಿಗೆ ವಿಶೇಷ ಪ್ರಶಸ್ತಿ ಪ್ರಕಟಿಸಲಾಗಿದೆ. ಹೊಂಬಾಳೆ ಫಿಲ್ಮ್ಸ್‌ನ ವಿಜಯ್ ಕಿರಗಂದೂರು, ಅಶ್ವಿನಿ ಪುನೀತ್ ರಾಜಕುಮಾರ್ ಮತ್ತು ತಾರಾ ಅನುರಾಧಾ ಅವರು ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

‘ಕೆಜಿಎಫ್ 2’ ಮತ್ತು ‘ಕಾಂತಾರ’ ಎರಡೂ ಚಿತ್ರಗಳನ್ನು ನಿರ್ಮಿಸಿ, ಕನ್ನಡ ಚಿತ್ರರಂಗಕ್ಕೆ ಕೀರ್ತಿ ತಂದ ನಿರ್ಮಾಣ ಸಂಸ್ಥೆ ಎಂಬ ಕಾರಣಕ್ಕೆ ಹೊಂಬಾಳೆ ಫಿಲ್ಮ್ಸ್‌ಗೆ ಈ ಪ್ರಶಸ್ತಿ ಸಂದಿದೆ. ಕಳೆದ ವರ್ಷ ಬಿಡುಗಡೆಯಾದ ನಟ ದಿವಂಗತ ಪುನೀತ್‌ ರಾಜ್‌ಕುಮಾರ್‌ ನಟನೆಯ ‘ಗಂಧದ ಗುಡಿ’ ಡಾಕ್ಯುಚಿತ್ರದ ನಿರ್ಮಾಣಕ್ಕಾಗಿ ಪಿಆರ್‌ಕೆ ಸ್ಟುಡಿಯೋಸ್‌ನ ಮುಖ್ಯಸ್ಥೆ, ನಿರ್ಮಾಪಕಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್ ಅವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ. ಕನ್ನಡ ಚಿತ್ರರಂಗಕ್ಕೆ ನಟಿ ತಾರಾ ಅನುರಾಧಾ ಅವರ ಕೊಡುಗೆಯನ್ನು ಸ್ಮರಿಸಿ, ಈ ಬಾರಿ ವಿಶೇಷ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಸುಧೀಂದ್ರ ವೆಂಕಟೇಶ್ ತಿಳಿಸಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.