ಇಂದು(ಮೇ 30) ತೆರೆಗಳಲ್ಲಿ ಎರಡು ಸಿನಿಮಾ ಬಿಡುಗಡೆಯಾಗುತ್ತಿವೆ.
ತಾಯವ್ವ: ಗೀತಪ್ರಿಯಾ ನಿರ್ಮಾಣ ಮಾಡಿ ನಾಯಕಿಯಾಗಿ ನಟಿಸಿದ ಸಿನಿಮಾ ಇದಾಗಿದೆ. ‘ಇದು ಅಪ್ಪಟ ಗ್ರಾಮೀಣ ಸೊಗಡಿನ, ಮಹಿಳಾ ಪ್ರಧಾನ ಕಥಾಹಂದರ ಹೊಂದಿರುವ ಸಾಮಾಜಿಕ ಕಳಕಳಿಯ ಚಿತ್ರ. ಗ್ರಾಮೀಣ ಪ್ರದೇಶದ ಸೂಲಗಿತ್ತಿ ಮಹಿಳೆಯೊಬ್ಬಳು ಹೇಗೆ ಹೆಣ್ಣುಮಕ್ಕಳ ರಕ್ಷಣೆ ಮಾಡಿ, ಸಮಾಜಕ್ಕೆ ಮಾದರಿಯಾಗುತ್ತಾಳೆ ಎಂಬ ವಿಷಯದ ಸುತ್ತ ಚಿತ್ರದ ಕಥಾಹಂದರವಿದೆ ಎಂದಿದೆ ಚಿತ್ರತಂಡ. ‘ತಾಯವ್ವ’ಳಾಗಿ ಗೀತಪ್ರಿಯಾ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ‘ಅಮರ ಫಿಲಂಸ್’ ಬ್ಯಾನರಿನಲ್ಲಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಸಾತ್ವಿಕ ಪವನ್ ಕುಮಾರ್ ನಿರ್ದೇಶನ ಮಾಡಿದ್ದಾರೆ.
ಠಾಣೆ: ಎಸ್.ಭಗತ್ ರಾಜ್ ನಿರ್ದೇಶನದ, ಪ್ರವೀಣ್ ನಾಯಕನಾಗಿ ನಟಿಸಿರುವ ಸಿನಿಮಾವಿದು. ಪಿ.ಸಿ.ಡಿ 2 ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಗಾಯತ್ರಿ ಎಂ. ಈ ಸಿನಿಮಾ ನಿರ್ಮಿಸಿದ್ದಾರೆ. ಒಂದು ಪೊಲೀಸ್ ಠಾಣೆಯಲ್ಲಿನ ಒಂದು ಪ್ರಕರಣದ ಕುರಿತು ಹಾಗೂ ನಾಲ್ಕು ಪ್ರಮುಖ ಪಾತ್ರಗಳ ಸುತ್ತ ನಡೆಯುವ ಕಥಾಹಂದರವನ್ನು ಈ ಚಿತ್ರ ಹೊಂದಿದೆ. ರಂಗಭೂಮಿ ಹಿನ್ನೆಲೆಯಿಂದ ಬಂದಿರುವ ನಾಯಕ ಪ್ರವೀಣ್ ಅವರಿಗೆ ಇದು ಚೊಚ್ಚಲ ಸಿನಿಮಾ. ರೋಹಿತ್ ನಾಗೇಶ್, ಪಿ.ಡಿ.ಸತೀಶ್ ಚಂದ್ರ, ಮಾನಸ ಹೊಳ್ಳ ಚಿತ್ರದ ತಾರಾಬಳಗದಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.