ADVERTISEMENT

‘ಜೋಗ್‌ 101’ರಲ್ಲಿ ವಿಜಯ ರಾಘವೇಂದ್ರ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2023, 20:40 IST
Last Updated 3 ಸೆಪ್ಟೆಂಬರ್ 2023, 20:40 IST
ವಿಜಯ ರಾಘವೇಂದ್ರ
ವಿಜಯ ರಾಘವೇಂದ್ರ   

ವಿಜಯ ರಾಘವೇಂದ್ರ ಮುಖ್ಯಭೂಮಿಕೆಯಲ್ಲಿರುವ ‘ಜೋಗ್ 101’ ಚಿತ್ರದ ಫಸ್ಟ್‌ ಲುಕ್‌ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರಕ್ಕೆ ವಿಜಯ್ ಕನ್ನಡಿಗ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. ಸೆವೆನ್ ಸ್ಟಾರ್ ಪಿಕ್ಚರ್ಸ್ ಲಾಂಛನದಲ್ಲಿ ರಘು ಈ ಚಿತ್ರವನ್ನು ನಿರ್ಮಿಸಿದ್ದಾರೆ.

‘ಸಿನಿಮಾ ಚಿತ್ರೀಕರಣ ಪೂರ್ಣಗೊಂಡಿದ್ದು, ಮುಂದಿನ ಕೆಲಸಗಳು ನಡೆಯುತ್ತಿವೆ. ಆದಷ್ಟು ಬೇಗ ಚಿತ್ರ ತೆರೆಗೆ ಬರಲಿದೆ’ ಎಂದು ಚಿತ್ರತಂಡ ಹೇಳಿದೆ. 

ವಿಜಯ ರಾಘವೇಂದ್ರ ಅವರಿಗೆ ನಾಯಕಿಯಾಗಿ ತೇಜಸ್ವಿನಿ ಶೇಖರ್ ನಟಿಸಿದ್ದಾರೆ. ಗೋವಿಂದೇಗೌಡ, ಕಡ್ಡಿಪುಡಿ ಚಂದ್ರು, ರಾಜೇಶ್ ನಟರಂಗ, ತಿಲಕ್, ನಿರಂಜನ್ ದೇಶಪಾಂಡೆ ಮೊದಲಾದವರ ತಾರಾಗಣವಿದೆ.

ADVERTISEMENT

ಅವಿನಾಶ್ ಆರ್. ಬಾಸೂತ್ಕರ್ ಸಂಗೀತ ನಿರ್ದೇಶನ, ಸುನೀತ್ ಹಲಗೇರಿ ಛಾಯಾಗ್ರಹಣ, ಮೋಹನ್ ರಂಗಕಹಳೆ ಸಂಕಲನ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.