ADVERTISEMENT

ಸಂಜನಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2020, 6:20 IST
Last Updated 11 ಡಿಸೆಂಬರ್ 2020, 6:20 IST
ಸಂಜನಾ
ಸಂಜನಾ   

ಬೆಂಗಳೂರು: ಡ್ರಗ್ಸ್ ಜಾಲದಲ್ಲಿ ಸಕ್ರೀಯರಾಗಿರುವ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟಿ ಸಂಜನಾ ಗಲ್ರಾನಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಶುಕ್ರವಾರಕ್ಕೆ ಮುಂದೂಡಿದೆ.

ಸಿಸಿಬಿ ಪರ ವಿಶೇಷ ಸರ್ಕಾರಿ ಅಭಿಯೋಜಕ ವೀರಣ್ಣ ತಿಗಡಿ ಅವರು ಸಂಜನಾ ಅವರ ವೈದ್ಯಕೀಯ ತಪಾಸಣಾ ವರದಿಯನ್ನು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್‌ಕುಮಾರ್ ಅವರಿದ್ದ ಪೀಠಕ್ಕೆ ಸಲ್ಲಿಸಿದರು.

ವರದಿ ಗಮನಿಸಿದ ಪೀಠ, ‘ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂದು ವರದಿ ಹೇಳಿದೆಯಲ್ಲ’ ಎಂದು ವಕೀಲರನ್ನು ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದ ವೀರಣ್ಣ ತಿಗಡಿ, ಸದ್ಯಕ್ಕೆ ಔಷದೋಪಚಾರ ಸಾಕು, ಅಗತ್ಯ ಬಿದ್ದರೆ ಮಾತ್ರ ಶಸ್ತ್ರ ಚಿಕಿತ್ಸೆ ನಡೆಸಬುದು ಎಂದು ವರದಿ ಹೇಳಿದೆ. ಈ ಬಗ್ಗೆ ಇನ್ನಷ್ಟು ವಿವರ ಸಲ್ಲಿಸಲು ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಲು ಕೋರಿದರು. ಮನವಿ ಪರಿಗಣಿಸಿದ ಪೀಠ, ವಿಚಾರಣೆ ಮುಂದೂಡಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.