ADVERTISEMENT

ನಟ ಸಂತೋಷ್ ಬಾಲರಾಜ್ ನಿಧನ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2025, 23:46 IST
Last Updated 6 ಆಗಸ್ಟ್ 2025, 23:46 IST
   

ಬೆಂಗಳೂರು: ನಗರದ ರಾಗಿಗುಡ್ಡ ಆಂಜನೇಯ ದೇವಸ್ಥಾನ ಬಳಿಯ ನಿವಾಸಿ, ನಟ ಸಂತೋಷ್ ಬಾಲರಾಜ್ (38) ತೀವ್ರ ಅನಾರೋಗ್ಯದಿಂದ ಮಂಗಳವಾರ ನಿಧನರಾದರು.

ಜಾಂಡೀಸ್‌ನಿಂದ ಬಳಲುತ್ತಿದ್ದ ಅವರು ಕೆಲವು ದಿನಗಳ ಹಿಂದೆ ಬನ ಶಂಕರಿಯ ಸಾಗರ್ ಅಪೊಲೊ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

‘ಕೆಂಪ’ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ್ದರು. ಬಳಿಕ ‘ಕರಿಯ-2’, ‘ಗಣಪ’ ಮುಂತಾದ ಚಿತ್ರಗಳಲ್ಲಿ ನಾಯಕ ನಟರಾಗಿದ್ದರು. ಅವರ ಇನ್ನೆರಡು ಚಿತ್ರಗಳು ಬಿಡುಗಡೆಗೆ ಬಾಕಿಯಿವೆ‌. ಸಂತೋಷ್‌ ಅವರ ತಂದೆ ‘ಕರಿಯ’ ಚಿತ್ರದ ನಿರ್ಮಾಪಕರೂ ಆಗಿದ್ದ ಆನೇಕಲ್ ಬಾಲರಾಜ್ ಕೆಲವು ವರ್ಷಗಳ ಹಿಂದೆ ನಿಧನರಾಗಿದ್ದರು. ಮೃತರಿಗೆ ತಾಯಿ ಮತ್ತು ಸಹೋದರಿ ಇದ್ದಾರೆ.

ADVERTISEMENT

ಮೃತರ ಅಂತ್ಯಕ್ರಿಯೆ ಬುಧವಾರ ಆನೇಕಲ್‌ನಲ್ಲಿ ನೆರವೇರಿತು ಎಂದು ಕುಟುಂಬದವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.