ADVERTISEMENT

Kannada Movie | ನದಿಯ ಹರಿವಿಗೆ ನೀಲಿ ಬಣ್ಣ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2023, 1:14 IST
Last Updated 11 ಆಗಸ್ಟ್ 2023, 1:14 IST
   

ರಕ್ಷಿತ್‌ ಶೆಟ್ಟಿ ನಟನೆಯ, ಹೇಮಂತ್‌ ಎಂ.ರಾವ್‌ ನಿರ್ದೇಶನದ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಪ್ರಚಾರ ಕಾರ್ಯ ಆರಂಭಿಸಿರುವ ಚಿತ್ರತಂಡ ಚಿತ್ರದ ಟೈಟಲ್‌ ಟ್ರ್ಯಾಕ್‌ ‘ನದಿಯೇ ಓ ನದಿಯೇ’ ಹಾಡನ್ನು ಬಿಡುಗಡೆ ಮಾಡಿದೆ. 

ಹಾಡನ್ನು ವಿಭಿನ್ನವಾಗಿ ಸೆರೆಹಿಡಿಯಲಾಗಿದ್ದು, ನೀಲಿ ಬಣ್ಣದ ನೂಲಿನ ಕೈಮಗ್ಗದಲ್ಲಿ ನದಿಯಂತೆ ಹಾಡು ಹರಿದಿದೆ. ಚರಣ್ ರಾಜ್ ಸಂಗೀತ ಸಂಯೋಜಿಸಿರುವ ಹಾಗೂ ಧನಂಜಯ್ ರಂಜನ್ ಬರೆದಿರುವ ಈ ಶೀರ್ಷಿಕೆ ಗೀತೆಯನ್ನು ಕಪಿಲ್ ಕಪಿಲನ್ ಹಾಡಿದ್ದಾರೆ. ಹಾಡು ಈಗಾಗಲೇ ಯೂಟ್ಯೂಬ್‌ನಲ್ಲಿ ಏಳು ಲಕ್ಷಕ್ಕೂ ಅಧಿಕ ವ್ಯೂವ್ಸ್‌ ಪಡೆದಿದೆ. 

‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಮೊದಲ ಭಾಗ ಸೆಪ್ಟೆಂಬರ್ 1 ರಂದು ಬಿಡುಗಡೆಯಾಗಲಿದ್ದು, ಈ ಭಾಗದಲ್ಲಿ ರಕ್ಷಿತ್‌ ಹಾಗೂ ರುಕ್ಮಿಣಿ ವಸಂತ್‌ ಪ್ರಮುಖ ಪಾತ್ರದಲ್ಲಿದ್ದಾರೆ. ಚಿತ್ರದ ಎರಡನೇ ಭಾಗ ಅಕ್ಟೋಬರ್ 20ರಂದು ತೆರೆಕಾಣಲಿದೆ. ಈ ಭಾಗದಲ್ಲಿ ಚೈತ್ರಾ ಜೆ.ಆಚಾರ್‌ ತಾರಾಗಣಕ್ಕೆ ಸೇರ್ಪಡೆಯಾಗಲಿದ್ದಾರೆ. ಉಳಿದಂತೆ ಅವಿನಾಶ್, ಶರತ್ ಲೋಹಿತಾಶ್ವ, ಅಚ್ಯುತ್‌ಕುಮಾರ್, ಪವಿತ್ರ ಲೋಕೇಶ್, ರಮೇಶ್ ಇಂದಿರಾ, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ತಾರಾಬಳಗದಲ್ಲಿದ್ದಾರೆ. ಚಿತ್ರಕ್ಕೆ ಅದ್ವೈತ ಗುರುಮೂರ್ತಿ ಛಾಯಾಚಿತ್ರಗ್ರಹಣ ಹಾಗೂ ಸುನೀಲ್ ಭಾರದ್ವಾಜ್ ಸಂಕಲನವಿದೆ. 

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.