
ಗಿಲ್ಲಿ ನಟ ಸದ್ಯ ಬಿಗ್‌ಬಾಸ್ ಮೂಲಕ ಸಾಕಷ್ಟು ಪ್ರಚಾರದಲ್ಲಿದ್ದಾರೆ. ಅದರ ಬೆನ್ನಲ್ಲೇ ಅವರ ಒಂದೊಂದೇ ಸಿನಿಮಾಗಳು ತೆರೆಗೆ ಬರಲು ಸಜ್ಜಾಗುತ್ತಿವೆ. ಗಿಲ್ಲಿ ನಾಯಕನಾಗಿ ನಟಿಸಿರುವ ‘ಸರ್ಕಾರಿ ಶಾಲೆ-H 8’ ಚಿತ್ರದ ಪೋಸ್ಟರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರಕ್ಕೆ ಗುಣ ಹರಿಯಬ್ಬೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.
‘ಆರಂಭದಲ್ಲಿ ಕುತೂಹಲ ಕೆರಳಿಸುತ್ತ ಸಾಗುವ ಈ ಚಿತ್ರದ ಕಥೆ ಒಂದು ವಿಗ್ರಹದ ಮೇಲೆ ಸಾಗುತ್ತದೆ. ಬೆಂಗಳೂರು, ಚಿತ್ರದುರ್ಗ, ಶಿರಾ, ಶಿವಮೊಗ್ಗ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. ಪೋಸ್ಟ್ ಪ್ರೊಡಕ್ಷನ್ ಹಾಗೂ ಸೆನ್ಸಾರ್ ಪ್ರಕ್ರಿಯೆ ಕೂಡ ಮುಗಿದಿದೆ. 2026ರ ಪ್ರಾರಂಭದಲ್ಲಿ ಚಿತ್ರವನ್ನು ಬಿಡುಗಡೆ ಮಾಡುವ ಯೋಜನೆಯಿದೆ’ ಎಂದಿದ್ದಾರೆ ನಿರ್ದೇಶಕ.
ಗಿರಿಚಂದ್ರ ಪ್ರೊಡಕ್ಷನ್ಸ್ ಮೂಲಕ ತೇಜಸ್ವಿನಿ ಎಸ್. ಬಂಡವಾಳ ಹೂಡಿದ್ದಾರೆ. ವಿಜೇತ್ ಮಂಜಯ್ಯ ಅವರ ಸಂಗೀತ ಸಂಯೋಜನೆಯಲ್ಲಿ ಮೂರು ಹಾಡುಗಳಿದ್ದು, ನಟ ಶರಣ್ ಹಾಗೂ ಮೆಹಬೂಬ್ ಸಾಬ್ ಒಂದೊಂದು ಹಾಡನ್ನು ಹಾಡಿದ್ದಾರೆ. ನಾಗೇಂದ್ರ ಪ್ರಸಾದ್ ಸಾಹಿತ್ಯವಿದೆ. ರವಿ ರಾಮದುರ್ಗ ಹಾಗೂ ವೀನಸ್ ಮೂರ್ತಿ ಅವರ ಛಾಯಾಚಿತ್ರಗ್ರಹಣ, ರವಿತೇಜ ಸಿ.ಹೆಚ್. ಅವರ ಸಂಕಲನ ಈ ಚಿತ್ರಕ್ಕಿದೆ.
ಮೇಘಶ್ರೀ ಚಿತ್ರದ ನಾಯಕಿ. ರಾಘವೇಂದ್ರ ರಾಜ್‌ಕುಮಾರ್,ಸುಚೇಂದ್ರ ಪ್ರಸಾದ್, ಜಗಪ್ಪ, ನವಾಜ್, ಸುಶ್ಮಿತ ಜಗಪ್ಪ ಮುಂತಾದವರು ಪ್ರಮುಖ ಪಾತ್ರಗಳಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.