ಪತ್ರಕರ್ತ ಹಾಗೂ ನಟ ಯತಿರಾಜ್ ನಿರ್ದೇಶನದ ‘ಸತ್ಯಂ ಶಿವಂ’ ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ.
‘ಸತ್ಯಂ ಶಿವಂ’ ಎಂದರೆ ಎರಡು ಪಾತ್ರಗಳ ಹೆಸರಲ್ಲ. ನಮ್ಮೊಳಗಿರುವ ಕೆಟ್ಟದ್ದನ್ನು ಹೊರಗೆ ಹಾಕಿ, ನಿಶ್ಕಲ್ಮಶವಾದಾಗ ಸತ್ಯದ ದರ್ಶನವಾಗಿ ಶಿವನ ಅನುಭೂತಿಯಾಗುತ್ತದೆ ಎಂಬುದು ಕಥೆಯ ಸಾರಾಂಶ. ಸಸ್ಪೆನ್ಸ್, ಥ್ರಿಲ್ಲರ್, ಸೆಂಟಿಮೆಂಟ್ ಎಲ್ಲವೂ ಇರುವ ಚಿತ್ರ. ನಿರ್ಮಾಪಕರೂ ಆಗಿರುವ ಬುಲೆಟ್ ರಾಜು ಈ ಚಿತ್ರದ ನಾಯಕನಾಗಿ ನಟಿಸಿದ್ದಾರೆ. ನಾನು ಕೂಡ ಈ ಚಿತ್ರದಲ್ಲಿ ಅಭಿನಯಿಸಿದ್ದೇನೆ’ ಎಂದರು ನಿರ್ದೇಶಕರು.
ಚಿತ್ರಕ್ಕೆ ವಿ.ಮನೋಹರ್ ಸಂಗೀತ, ವಿದ್ಯಾ ನಾಗೇಶ್ ಛಾಯಾಗ್ರಹಣವಿದೆ. ಸಂಜನಾ ನಾಯ್ಡು, ಮೈಕೋ ನಾಗರಾಜ್, ಅರವಿಂದ್ ರಾವ್ ಮೊದಲಾದವರು ಚಿತ್ರದಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.