ADVERTISEMENT

ಸೆಕೆಂಡ್‌ ಲೈಫ್‌ನಲ್ಲಿದೆ ಕರುಳುಬಳ್ಳಿಯ ಕಥೆ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2022, 11:43 IST
Last Updated 2 ಆಗಸ್ಟ್ 2022, 11:43 IST
ಸಿಂಧೂರಾವ್‌, ಆದರ್ಶ್ ಗುಂಡುರಾಜ್
ಸಿಂಧೂರಾವ್‌, ಆದರ್ಶ್ ಗುಂಡುರಾಜ್   

‘ಸೆಕೆಂಡ್‌ ಲೈಫ್‌’ ಹೆಸರಿನ ಚಿತ್ರವೊಂದು ತೆರೆಗೆ ಬರಲು ಸಿದ್ಧವಾಗಿದೆ.

ಜಯಣ್ಣ ಫಿಲಂಸ್ ಹಾಗೂ ಶುಕ್ರ ಫಿಲಂಸ್ ನಿರ್ಮಿಸಿರುವ ‘ಸೆಕೆಂಡ್‌ ಲೈಫ್‌’ (2nd ಲೈಫ್) ಚಿತ್ರವನ್ನು ರಾಜು ದೇವಸಂದ್ರ ನಿರ್ದೇಶಿಸಿದ್ದಾರೆ. ಈ ಹಿಂದೆ ಇವರು ‘ಅಕ್ಷತೆ’ ಸೇರಿದಂತೆ ಮೂರು ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಇದು ನಾಲ್ಕನೇ ಚಿತ್ರ.

‘ಇದು ನನ್ನ ನಾಲ್ಕನೇ ನಿರ್ದೇಶನದ ಚಿತ್ರ. ಥ್ರಿಲ್ಲರ್ ಕಥಾಹಂದರ ಹೊಂದಿದೆ ಈ ಚಿತ್ರ. ಮಂಜುಳಾ ರಮೇಶ್ ಅವರು ಕಥೆ, ಚಿತ್ರಕಥೆ ಬರೆದಿದ್ದಾರೆ. ನಾನು ನಿರ್ದೇಶನ ಮಾಡಿದ್ದೇನೆ. ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಚಿತ್ರ ಇದಾಗಿದೆ’ ಎಂದು ನಿರ್ದೇಶಕ ರಾಜು ದೇವಸಂದ್ರ ತಿಳಿಸಿದರು.

ADVERTISEMENT

‘ವಿಭಿನ್ನ ಕಥೆಯಿರುವ ಚಿತ್ರ ನಮ್ಮದು. ಮಗು ಹುಟ್ಟಿದ ಕೆಲವೆ ದಿನಗಳಲ್ಲಿ ಕರುಳು ಬಳ್ಳಿ(ಹೊಕ್ಕಳ ಬಳ್ಳಿ) ಬೀಳುತ್ತದೆ. ಇದನ್ನು ಶೇಖರಿಸಿಡುವ ಕಾರ್ಯ ಈಗ ಭರದಿಂದ ಸಾಗಿದೆ. ಇದನ್ನು ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗೆ ಬಳಸಿಕೊಳ್ಳಲಾಗುತ್ತಿದೆ. ಅಂತಹ ಕಥಾವಸ್ತು ಆಧರಿಸಿ ನಮ್ಮ ಚಿತ್ರ ನಿರ್ಮಾಣವಾಗಿದೆ. ಒಂದು ಬೇಜಾರಿನ ಸಂಗತಿ ಅಂದರೆ, ಹೊಸ ಪ್ರಯತ್ನಗಳಿಗೆ ಪ್ರೋತ್ಸಾಹ ನೀಡುವ ಪುನೀತ್ ರಾಜಕುಮಾರ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡಬೇಕಿತ್ತು. ಆದರೆ ವಿಧಿಬರಹವೇ ಬೇರೆಯಾಗಿತ್ತು. ಈಗ ನಮ್ಮ ಚಿತ್ರದ ಹಾಡು ಪಿ.ಆರ್.ಕೆ ಮೂಲಕವೇ ಬಿಡುಗಡೆಯಾಗಿರುವುದು ಖುಷಿಯ ವಿಚಾರ’ ಎಂದು ನಾಯಕ ಆದರ್ಶ್ ಗುಂಡುರಾಜ್ ತಿಳಿಸಿದರು.

‘ಈ‌ ಚಿತ್ರದಲ್ಲಿ ನನ್ನದು ಕುರುಡಿಯ ಪಾತ್ರ. ನಿರ್ದೇಶಕರು ನನಗೆ ಕಥೆ ಬಗ್ಗೆ ಏನೂ ಹೇಳಿಲ್ಲ. ಪಾತ್ರದ ಕುರಿತು ಮಾತ್ರ ಹೇಳಿದ್ದಾರೆ’ ಎಂದರು ನಾಯಕಿ ಸಿಂಧೂ ರಾವ್.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.