ADVERTISEMENT

ಹೊರಬಂತು ‘ಸೀಸ್ ಕಡ್ಡಿ’ ಹಾಡು

​ಪ್ರಜಾವಾಣಿ ವಾರ್ತೆ
Published 8 ಮೇ 2025, 0:30 IST
Last Updated 8 ಮೇ 2025, 0:30 IST
ಚಿತ್ರದ ಪೋಸ್ಟರ್‌
ಚಿತ್ರದ ಪೋಸ್ಟರ್‌   

ಪೆನ್ಸಿಲ್‌ ಅನ್ನು ರೂಪಕವಾಗಿಟ್ಟುಕೊಂಡು ಸಿದ್ಧವಾಗಿರುವ ‘ಸೀಸ್ ಕಡ್ಡಿ’ ಚಿತ್ರದ ‘ಬೇಧವು ಎಲ್ಲಿದೆ ಬೀಳುವ ಮಳೆಗೆ’ ಹಾಡು ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ರತನ್ ಗಂಗಾಧರ್ ನಿರ್ದೇಶನದ ಚಿತ್ರ ಬಿಡುಗಡೆಗೆ ಸಿದ್ಧವಿದೆ.

‘ಹೈಪರ್ ಲಿಂಕ್ ಆಂಥಾಲಜಿ ಶೈಲಿಯ ಈ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ‘ಯು’ ಸರ್ಟಿಫಿಕೆಟ್ ಸಿಕ್ಕಿದೆ. ಒಂದೊಳ್ಳೆ ಕುಟುಂಬದಲ್ಲಿ ಹುಟ್ಟಿ, ಎಲ್ಲ ಜಂಜಾಟಗಳಿಂದ ತಪ್ಪಿಸಿಕೊಳ್ಳಲು ಲೋಕ ಸಂಚಾರಕ್ಕೆ ಹೊರಟಾತ ಈ ಕಥೆಯ ಕೇಂದ್ರ ಬಿಂದು’ ಎಂದಿದ್ದಾರೆ ರತನ್‌.

ಈ ಹಾಡಿಗೆ ಮಹೇಂದ್ರ ಗೌಡ ಸಾಹಿತ್ಯ ಬರೆದಿದ್ದು, ಕೆ. ಸಿ. ಬಾಲ ಸಾರಂಗನ್ ಸಂಗೀತವಿದೆ. ಸಂಪತ್ ಶಿವಶಂಕರ್, ಕೃತಿ ನಾಣಯ್ಯ ಜೊತೆಗೆ ನಿರ್ದೇಶಕರು ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.