ದಕ್ಷಿಣ ಭಾರತದ ಖ್ಯಾತ ನಟಿ ಸಮಂತಾ ಅಭಿನಯಿಸುತ್ತಿರುವ ತೆಲುಗಿನ ‘ಶಾಕುಂತಲಂ’ ಸಿನಿಮಾದ ಫಸ್ಟ್ಲುಕ್ ಪೋಸ್ಟ್ ಬಿಡುಗಡೆಯಾಗಿದೆ.
ಸಮಂತಾ ಶಕುಂತಲೆಯಾಗಿ ಪೋಸ್ ನೀಡಿದ್ದಾರೆ. ಈ ಪೋಸ್ಟರ್ ಅನ್ನು ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ‘ಶಾಕುಂತಲಂ’ ಚಿತ್ರದ ಬಗ್ಗೆ ಸಮಂತಾ ಅಭಿಮಾನಿಗಳು ವಿಶೇಷವಾದ ನಿರೀಕ್ಷೆ ಇಟ್ಟುಕೊಂಡಿದ್ದು ಸಾಮಾಜಿಕ ಮಾಧ್ಯಮಗಳಲ್ಲಿ ‘ಶಾಕುಂತಲಂ’ ಪೋಸ್ಟರ್ ಅನ್ನು ಶೇರ್ ಮಾಡುತ್ತಿದ್ದಾರೆ.
‘ಶಾಕುಂತಲಂ’ ಪೋಸ್ಟರ್ ಬಿಡುಗಡೆಯಾಗಿ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ಜನರು ಲೈಕ್ ಮಾಡಿದ್ದಾರೆ. ಅಭಿಮಾನಿಗಳು ಕಾಮೆಂಟ್ಗಳ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ.
ಶ್ವೇತವರ್ಣದ ಸೀರೆಯಲ್ಲಿ, ಪ್ರಾಣಿ, ಪಕ್ಷಿಗಳೊಂದಿಗೆ ಸುಂದರವಾದ ಪರಿಸರದಲ್ಲಿ ಸಮಂತಾ ಮನಮೋಹಕವಾಗಿ ಕಾಣಿಸಿಕೊಂಡಿದ್ದಾರೆ.
ಪೌರಾಣಿಕ ಕಥಾಹಂದರ ಇರುವ ಈ ಚಿತ್ರವನ್ನು ಗುಣಶೇಖರ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ನೀಲಿಮಾ ಗುಣ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಕನ್ನಡ, ಹಿಂದಿ, ಮಲಯಾಳಂ, ತಮಿಳು ಹಾಗೂ ತೆಲುಗಿನಲ್ಲಿ ಈ ಸಿನಿಮಾ ಮೂಡಿಬರಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.