ರಾಷ್ಟ್ರಪ್ರಶಸ್ತಿ ಪಡೆದ ಬಾಲಿವುಡ್ ನಟ ಶಾರುಕ್ ಖಾನ್
ಪಿಟಿಐ ಚಿತ್ರಗಳು
ನವದೆಹಲಿ: ಬಾಲಿವುಡ್‌ನ ಬಾದ್‌ಶಾ ಎಂದೇ ಹೆಸರು ಪಡೆದಿರುವ ನಟ ಶಾರುಕ್ ಖಾನ್ 30 ವರ್ಷಗಳ ಸಿನಿಪಯಣದಲ್ಲಿ ಮೊದಲ ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ.
2023ರಲ್ಲಿ ಬಿಡುಗಡೆಯಾದ ‘ಜವಾನ್’ ಚಿತ್ರಕ್ಕಾಗಿ ಶಾರುಕ್ ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಮಂಗಳವಾರ ರಾಷ್ಟ್ರಪತಿ ಭವನದಲ್ಲಿ ನಡೆದ 71ನೇ ರಾಷ್ಟ್ರಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಶಾರುಕ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ ನೀಡಿ ಗೌರವಿಸಿದರು.
ಜವಾನ್ ಚಿತ್ರದಲ್ಲಿನ ನಟನೆಗೆ ಶಾರುಕ್ ಅಪಾರ ಮೆಚ್ಚುಗೆ ಗಳಿಸಿದ್ದರು. ಉತ್ತಮ ಸಾಹಸ, ಮನಮುಟ್ಟುವ ನಟನೆಯಿಂದ ಪ್ರೇಕ್ಷಕರಿಂದ ಮತ್ತು ವಿಮರ್ಶಕರಿಂದ ಸೈ ಎನಿಸಿಕೊಂಡಿದ್ದರು.
2023ರಲ್ಲಿ ‘ಜವಾನ್’ ಬ್ಲಾಕ್‌ಬಾಸ್ಟರ್ ಚಿತ್ರವಾಗಿ ಹೊರಹೊಮ್ಮಿತ್ತು.
ಶಾರುಕ್ ಜತೆಗೆ ದೀಪಿಕಾ ಪಡುಕೋಣೆ, ವಿಜಯ್ ಸೇತುಪತಿ, ನಯನತಾರಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.