ADVERTISEMENT

ನಟ ಶಾರೂಕ್‌ ಖಾನ್‌ಗೆ 57ರ ಸಂಭ್ರಮ: ಅಭಿಮಾನಿಗಳಿಂದ ಶುಭಾಶಯ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2022, 5:43 IST
Last Updated 2 ನವೆಂಬರ್ 2022, 5:43 IST
ಶಾರೂಕ್‌ ಖಾನ್‌
ಶಾರೂಕ್‌ ಖಾನ್‌   

ಮುಂಬೈ: ಬಾಲಿವುಡ್‌ ಜನಪ್ರಿಯ ನಟಶಾರುಕ್‌ ಖಾನ್‌ ಅವರು ಇಂದು (ನ.2) 57ನೇ ಜನ್ಮದಿನದ ಸಂಭ್ರಮದಲ್ಲಿದ್ದಾರೆ.

ತಮ್ಮ ನೆಚ್ಚಿನ ನಟನಿಗೆ ಜನ್ಮದಿನದ ಶುಭಾಶಯ ಕೋರಲು ಅಭಿಮಾನಿಗಳು ನಿನ್ನ ಮಧ್ಯೆ ರಾತ್ರಿಯಿಂದ ಅವರ ನಿವಾಸದ ಸುತ್ತ ನೆರೆದಿದ್ದರು.

ಅವರ ನಿವಾಸದ ಸುತ್ತ ಪೊಲೀಸರು ವ್ಯಾಪಕ ಬಂದೋಬಸ್ತ್‌ ಮಾಡಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ADVERTISEMENT

ಪ್ರತಿ ವರ್ಷದಂತೆ ಈ ವರ್ಷವೂ ಅವರು ಮನೆಯ ಬಾಲ್ಕನಿಗೆ ಬಂದು ಅಭಿಮಾನಿಗಳಿಗೆಕೈಜೋಡಿಸಿ ನಮಸ್ಕರಿಸಿ ಧನ್ಯವಾದ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲೂ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.

ಸಿನಿಮಾರಂಗದ ಗಣ್ಯರು, ರಾಜಕಾರಣಿಗಳು, ಉದ್ಯಮಿಗಳು ಸೇರಿದಂತೆ ಅಭಿಮಾನಿಗಳು ಜನ್ಮದಿನದ ಶುಭಾಶಯಗಳನ್ನು ಹೇಳುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.