ADVERTISEMENT

ಭಿನ್ನ ಲುಕ್‌ನಲ್ಲಿ ರಂಗಾಯಣ ರಘು: ಶಾಖಾಹಾರಿ ಫಸ್ಟ್ ಲುಕ್ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2023, 18:49 IST
Last Updated 17 ಅಕ್ಟೋಬರ್ 2023, 18:49 IST
ಚಿತ್ರದ ಫಸ್ಟ್‌ಲುಕ್‌
ಚಿತ್ರದ ಫಸ್ಟ್‌ಲುಕ್‌   

ಹಾಸ್ಯ ಪಾತ್ರಗಳಿಗೆ ಸೀಮಿತವಾಗಿದ್ದ ನಟ ರಂಗಾಯಣ ರಘು ಈಗ ಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಬಾನ ದಾರಿಯಲ್ಲಿ’ ಚಿತ್ರದಲ್ಲೊಂದು ಭಾವುಕ ಪಾತ್ರ ಮಾಡಿದ್ದ ರಘು ‘ಶಾಖಾಹಾರಿ’ ಚಿತ್ರದಲ್ಲಿ ಬೇರೆಯದೇ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಫಸ್ಟ್‌ಲುಕ್‌ ಬಿಡುಗಡೆಯಾಗಿದ್ದು ಬಾಣಸಿಗನಾಗಿ ಕಾಣಿಸಿಕೊಂಡಿರುವ ನಾಯಕ ರಂಗಾಯಣ ರಘು ಅವರ ಲುಕ್‌ ಗಮನ ಸೆಳೆಯುತ್ತಿದೆ. ಎಸ್‌.ಐ ಪಾತ್ರದಲ್ಲಿ ಕಾಣಿಸಿಕೊಂಡಿರುವ ಗೋಪಾಲಕೃಷ್ಣ ದೇಶಪಾಂಡೆ ಅಪರಾಧಿಗಾಗಿ ಹುಡುಕುತ್ತಿದ್ದಾರೆ ಎಂಬುದು ಮೇಲ್ನೋಟಕ್ಕೆ ಗೋಚರಿಸುತ್ತಿದೆ.

‘ಕೀಳಂಬಿ ಮೀಡಿಯಾ ಲ್ಯಾಬ್’ ಮೂಲಕ ರಾಜೇಶ್ ಕೀಳಂಬಿ ಹಾಗೂ ರಂಜಿನಿ ಪ್ರಸನ್ನ ಜೊತೆಗೂಡಿ ನಿರ್ಮಿಸಿರುವ ಚಿತ್ರಕ್ಕೆ ಸಂದೀಪ್ ಸುಂಕದ್ ಆ್ಯಕ್ಷನ್‌–ಕಟ್ ಹೇಳಿದ್ದಾರೆ.

‘ತೀರ್ಥಹಳ್ಳಿಯ ಊರೊಂದರಲ್ಲಿ ನಡೆಯುವ ನಿಗೂಢ ಘಟನೆಯ ಸುತ್ತ ಸಾಗುವ ಕಥೆ ಇದಾಗಿದ್ದು, ಎಸ್.ಐ ಆಗಿ ಗೋಪಾಲಕೃಷ್ಣ ದೇಶಪಾಂಡೆ ಮತ್ತು ಸುಜಯ್ ಶಾಸ್ತ್ರಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಉಳಿದಂತೆ ಹರಿಣಿ, ಪ್ರತಿಮಾ ನಾಯಕ್ ಮತ್ತಿತರು ಚಿತ್ರದಲ್ಲಿದ್ದಾರೆ. ಶೀಘ್ರದಲ್ಲಿಯೇ ಚಿತ್ರ ತೆರೆಗೆ ಬರಲಿದೆ’ ಎಂದು ಮಾಹಿತಿ ನೀಡಿದರು ನಿರ್ದೇಶಕ ಸಂದೀಪ್. 

ADVERTISEMENT

ವಿಶ್ವಜಿತ್ ರಾವ್ ಛಾಯಾಗ್ರಹಣ, ಶಶಾಂಕ್ ನಾರಾಯಣ ಸಂಕಲನ, ಮಯೂರ್ ಅಂಬೆಕಲ್ಲು ಸಂಗೀತ ಚಿತ್ರಕ್ಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.