ADVERTISEMENT

‘ಶಂಭೋ ಶಿವ ಶಂಕರ’ನಿಗೆ ಅದ್ದೂರಿ ಹಾಡಿನ‌ ಚಿತ್ರೀಕರಣ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2021, 7:24 IST
Last Updated 1 ಫೆಬ್ರುವರಿ 2021, 7:24 IST
‘ಶಂಭೋ ಶಿವ ಶಂಕರ’ ಚಿತ್ರದ ಹಾಡಿನ ದೃಶ್ಯ
‘ಶಂಭೋ ಶಿವ ಶಂಕರ’ ಚಿತ್ರದ ಹಾಡಿನ ದೃಶ್ಯ   

ಅಘನ್ಯ ಪಿಕ್ಚರ್ಸ್ ಲಾಂಛನದಲ್ಲಿ ವರ್ತೂರ್ ಮಂಜು ಅವರು ನಿರ್ಮಿಸುತ್ತಿರುವ ‘ಶಂಭೋ ಶಿವ ಶಂಕರ’ ಚಿತ್ರದ ಹಾಡಿನ‌ ಚಿತ್ರೀಕರಣ ಮೋಹನ್ ಬಿ ಕೆರೆ ಸ್ಟುಡಿಯೋದಲ್ಲಿ ನಡೆದಿದೆ.

ಗೌಸ್ ಫಿರ್ ಬರೆದಿರುವ ‘ನಾಟಿಕೋಳಿನಲ್ಲಿ ಮೂಳೆ ಸರಕನೇ ಎಳಿತ್ತಾಳೆ' ಎಂಬ ಹಾಡಿಗೆ ನಾಯಕರಾದ ಅಭಯ್‌ ಪುನೀತ್, ರೋಹಿತ್ ಹಾಗೂ ರಕ್ಷಕ್ ಅವರು ರಾಜಸ್ಥಾನದ ಬೆಡಗಿ ಕಿರಣ್ ಅವರೊಂದಿಗೆ ಹೆಜ್ಜೆ ಹಾಕಿದ್ದಾರೆ. ಕಲೈ ಅವರು ಈ ಹಾಡಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. ಇದು ಚಿತ್ರದಲ್ಲಿ ನಾಯಕರನ್ನು ಪರಿಚಯಿಸುವ ಗೀತೆಯೂ ಹೌದು.

ಇನ್ನೆರಡು ಸಾಹಸ ಸನ್ನಿವೇಶಗಳ ಚಿತ್ರೀಕರಣ ಮಾತ್ರ ಬಾಕಿ ಇದೆ. ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ.
ಶಂಕರ್ ಕೋನಮಾನಹಳ್ಳಿ ಈ ಚಿತ್ರದ ನಿರ್ದೇಶಕರು. ಕಥೆ, ಚಿತ್ರಕಥೆ, ಸಂಭಾಷಣೆ ಕೂಡಾ ಅವರದ್ದೇ.
ಗೌಸ್‌ಪೀರ್ ಹಾಗೂ ಹಿತನ್ ಹಾಸನ್ ಹಾಡುಗಳನ್ನು ಬರೆದಿದ್ದು, ಹಿತನ್ ಹಾಸನ್ ಅವರು ಸಂಗೀತ ನೀಡುತ್ತಿದ್ದಾರೆ‌.

ADVERTISEMENT

ನಟರಾಜ್ ಮುದ್ದಾಲ ಛಾಯಾಗ್ರಹಣ, ಕಲೈ ನೃತ್ಯ ನಿರ್ದೇಶನ ಹಾಗೂ ವೆಂಕಟೇಶ್ ಯುಡಿವಿ ಅವರ ಸಂಕಲನ ಈ ಚಿತ್ರಕ್ಕಿದೆ.

‘ಶಂಭೋ ಶಿವ ಶಂಕರ’ ಮೂರು ನಾಯಕ ಪಾತ್ರಗಳ ಹೆಸರಾಗಿದ್ದು, ಅಭಯ್ ಪುನೀತ್, ರೋಹಿತ್ ಹಾಗೂ ರಕ್ಷಕ್ ಈ ಮೂರು ಪಾತ್ರಗಳಲ್ಲಿ ಕಾಣಿಸಿಕೊಳುತ್ತಿದ್ದಾರೆ. ಸುಪ್ರಿಂ ಹೀರೋ ಶಶಿಕುಮಾರ್, ಸೋನಾಲ್ ಮೊಂತೇರೋ, ಜೋಗಿ‌ ನಾಗರಾಜ್, ಪ್ರದೀಪ್ ತಿಪಟೂರು, ಆಶಾ ಸುಜಯ್, ಪ್ರೇಮ, ರೋಹಿಣಿ, ಸಂಗಮೇಶ್ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.