ಶರಣ್
ಆರ್.ಜೆ. ಪ್ರದೀಪ್ ನಿರ್ಮಾಣದ, ನಾಗರಾಜ್ ಸೋಮಯಾಜಿ ಆ್ಯಕ್ಷನ್ ಕಟ್ ಹೇಳಿರುವ ‘ಮರ್ಯಾದೆ ಪ್ರಶ್ನೆ’ ಸಿನಿಮಾ ನ.22ರಂದು ಬಿಡುಗಡೆಯಾಗುತ್ತಿದೆ. ಇತ್ತೀಚೆಗೆ ಸಿನಿಮಾದ ಹಾಡೊಂದು ಬಿಡುಗಡೆಯಾಗಿದ್ದು ಸ್ಯಾಂಡಲ್‌ವುಡ್ ಅಧ್ಯಕ್ಷರು ಧ್ವನಿಯಾಗಿದ್ದಾರೆ.
ಸಕ್ಕತ್ ಸ್ಟುಡಿಯೊ ಈ ಸಿನಿಮಾ ನಿರ್ಮಾಣ ಮಾಡಿದೆ. ಮಧ್ಯಮ ವರ್ಗವನ್ನು ಕುರಿತ ಈ ಹಾಡಿಗೆ ಪ್ರಮೋದ್ ಮರವಂತೆ ಸಾಹಿತ್ಯವಿದ್ದು, ನಟ ಶರಣ್ ಹಾಡಿದ್ದಾರೆ. ಸಂಗೀತ ನಿರ್ದೇಶಕ ಅರ್ಜುನ್ ರಾಮು ಈ ಹಾಡನ್ನು ಜಾನಪದ ಶೈಲಿಯಲ್ಲಿ ಸಂಯೋಜಿಸಿದ್ದಾರೆ. ಈ ಹಾಡಿನಲ್ಲಿ ನಟರ ಪಾತ್ರದ ಪರಿಚಯದ ಜೊತೆಗೆ ಅವರು ಬದುಕುತ್ತಿರುವ ಮಧ್ಯಮ ವರ್ಗದ ಸಮಾಜವನ್ನು ಪರಿಚಯಿಸಲಾಗಿದೆ. ಚಿತ್ರದಲ್ಲಿ ನಟ ರಾಕೇಶ್ ಅಡಿಗ ಒಬ್ಬ ಕಾರ್ಯಕರ್ತನಾಗಿ, ನಟ ಸುನಿಲ್ ರಾವ್ ಅವರು ಒಬ್ಬ ಡೆಲಿವರಿ ಬಾಯ್‌ಯಾಗಿ, ನಟ ಪೂರ್ಣಚಂದ್ರ ಮೈಸೂರು ಕ್ಯಾಬ್ ಚಾಲಕನಾಗಿ ಹಾಗೂ ತೇಜು ಬೆಳವಾಡಿ ಅವರು ಸೇಲ್ಸ್ ಗರ್ಲ್ ಆಗಿ ಪಾತ್ರ ನಿಭಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.