ತಮ್ಮ ಅಮೋಘ ಅಭಿನಯದ ಮೂಲಕ ಕನ್ನಡದ ಸಿನಿರಸಿಕರನ್ನು ರಂಜಿಸುತ್ತಿದ್ದ ನಟ ಶಶಿಕುಮಾರ್. ಒಂದಿಷ್ಟು ಕಾಲ ನಟನೆಯಿಂದ ದೂರ ಉಳಿದಿದ್ದ ಈ ನಟ ಈಗ ‘ಶಂಭೋ ಶಿವ ಶಂಕರ’ ಸಿನಿಮಾದ ಮೂಲಕ ಮತ್ತೆ ನಟಿಸಲಿದ್ದಾರೆ. ಖಡಕ್ ಪೊಲೀಸ್ ಅಧಿಕಾರಿ ಪಾತ್ರಕ್ಕೆ ಶಶಿಕುಮಾರ್ ಬಣ್ಣ ಹಚ್ಚಲಿದ್ದು ಚಿತ್ರದಲ್ಲಿ ಶಶಿಕುಮಾರ್ ಅವರದ್ದು ಮಹತ್ವದ ಪಾತ್ರ ಎನ್ನುತ್ತಾರೆ ನಿರ್ದೇಶಕರು.
ಈಗಾಗಲೇ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದ್ದು, ಡಿಸೆಂಬರ್ 9ರಿಂದ ಎರಡನೇ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ಆರಂಭವಾಗಲಿದೆ. ಶಶಿಕುಮಾರ್ ಸೇರಿದಂತೆ ಚಿತ್ರದಲ್ಲಿ ಅಭಿನಯಿಸುವ ಎಲ್ಲಾ ಕಲಾವಿದರು ದ್ವಿತೀಯ ಹಂತದ ಚಿತ್ರೀಕರಣದಲ್ಲಿ ಭಾಗವಹಿಸಲಿದ್ದಾರೆ.
ಅಘನ್ಯ ಪಿಕ್ಚರ್ಸ್ ಲಾಂಛನದಲ್ಲಿ ವರ್ತೂರ್ ಮಂಜು ಅವರು ನಿರ್ಮಿಸುತ್ತಿರುವ ‘ಶಂಭೋ ಶಿವ ಶಂಕರ’ ಚಿತ್ರವನ್ನು ಶಂಕರ್ ಕೋನಮಾನಹಳ್ಳಿ ನಿರ್ದೇಶಿಸುತ್ತಿದ್ದಾರೆ. ಕಿರುತೆರೆಯಲ್ಲಿ ಅನೇಕ ಜನಪ್ರಿಯ ಧಾರಾವಾಹಿಗಳನ್ನು ನಿರ್ದೇಶಿಸುತ್ತಿರುವ ಶಂಕರ್ ಅವರಿಗೆ ಚಂದನವನದಲ್ಲಿ ಇದು ಮೊದಲನೇ ಚಿತ್ರ. ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಕೂಡ ಅವರದ್ದೇ. ಗೌಸ್ ಫೀರ್ ಹಾಗೂ ಹಿತನ್ ಹಾಸನ್ ಹಾಡುಗಳನ್ನು ಬರೆದಿದ್ದು, ಹಿತನ್ ಹಾಸನ್ ಅವರೇ ಸಂಗೀತ ನೀಡುತ್ತಿದ್ದಾರೆ.
ನಟರಾಜ್ ಮುದ್ದಾಲ ಛಾಯಾಗ್ರಹಣ, ಕಲೈ ನೃತ್ಯ ನಿರ್ದೇಶನ, ವೆಂಕಟೇಶ್ ಯುಡಿವಿ ಸಂಕಲನ ಹಾಗೂ ಅಲ್ಟಿಮೆಟ್ ಶಿವು ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ಚಿತ್ರದಲ್ಲಿ ಸೋನಲ್ ಮೊಂತೆರೊ ನಾಯಕಿಯಾಗಿ ನಟಿಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.