
ಬಹುತೇಕ ಹೊಸರಿಂದ ಕೂಡಿರುವ ‘ಶಿಖಂಡಿ’ ಚಿತ್ರದ ಮೊದಲ ಪೋಸ್ಟರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಗುರುಮೂರ್ತಿ ವಿ. ಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ಇವರು ಈ ಹಿಂದೆ ‘ಮಾರಕಾಸ್ತ್ರ’ ಚಿತ್ರವನ್ನು ನಿರ್ದೇಶಿಸಿದ್ದರು.
‘ಮಹಾಭಾರತದಲ್ಲಿ ಬರುವ ಶಿಖಂಡಿ ಪಾತ್ರವೇ ನಮ್ಮ ಚಿತ್ರದ ಕಥೆಗೆ ಸ್ಫೂರ್ತಿ. ಆತ ಪುನರ್ಜನ್ಮ ಪಡೆದು ತನ್ನ ಸೇಡನ್ನು ತೀರಿಸಿಕೊಳ್ಳುವುದನ್ನು ನಾವೆಲ್ಲ ಕೇಳಿದ್ದೇವೆ. ಈ ಅಂಶವನ್ನೇ ಪ್ರಧಾನವಾಗಿಟ್ಟುಕೊಂಡು ಈ ಚಿತ್ರದ ಕಥೆ ಹೆಣೆಯಲಾಗಿದೆ. ಸಸ್ಪೆನ್ಸ್, ಥ್ರಿಲ್ಲರ್, ಹಾರರ್, ಕಾಮಿಡಿ ಸೇರಿದಂತೆ ಎಲ್ಲಾ ಅಂಶಗಳು ಇರುವ ಕೌಟುಂಬಿಕ ಕಥಾಹಂದರದ ಚಿತ್ರವಿದು. ಚಿತ್ರೀಕರಣ ಮುಗಿದಿದ್ದು, ಮೇ ತಿಂಗಳಲ್ಲಿ ಚಿತ್ರ ಬಿಡುಗಡೆ ಆಲೋಚನೆ ಇದೆ’ ಎಂದರು ನಿರ್ದೇಶಕ.
ಪೋಲಾ ಪ್ರವೀಣ್ ಕುಮಾರ್ ಚಿತ್ರದ ನಿರ್ಮಾಪಕ. ಯುವರಾಜ್ ಗೌಡಗೆ ಖ್ಯಾತಿ ಜೋಡಿಯಾಗಿದ್ದಾರೆ. ನೀತು, ಚಾಂದಿನಿ, ರಘು ರಾಮನಕೊಪ್ಪ, ದೀಪಕ್ ಶೆಟ್ಟಿ, ವಿಜಯ್ ಚೆಂಡೂರ್ ಮುಂತಾದವರು ಚಿತ್ರದಲ್ಲಿದ್ದಾರೆ. ಸ್ವಾಮಿ ಛಾಯಾಚಿತ್ರಗ್ರಹಣ, ಮಂಜುಕವಿ ಸಂಗೀತ, ಪ್ರದ್ಯೋತನ್ ಹಿನ್ನೆಲೆ ಸಂಗೀತ ಚಿತ್ರಕ್ಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.