ADVERTISEMENT

ನಟಿ ಶಿಲ್ಪಾ ಶೆಟ್ಟಿ ಅಭಿನಯದ ‘ಸುಖೀ’ ಚಿತ್ರದ ಪೋಸ್ಟರ್ ಬಿಡುಗಡೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ಮಾರ್ಚ್ 2022, 5:38 IST
Last Updated 2 ಮಾರ್ಚ್ 2022, 5:38 IST
‘ಸುಖೀ’ ಸಿನಿಮಾದಲ್ಲಿ ಶಿಲ್ಪಾ ಶೆಟ್ಟಿ (ಇನ್‌ಸ್ಟಾಗ್ರಾಮ್‌ ಚಿತ್ರ)
‘ಸುಖೀ’ ಸಿನಿಮಾದಲ್ಲಿ ಶಿಲ್ಪಾ ಶೆಟ್ಟಿ (ಇನ್‌ಸ್ಟಾಗ್ರಾಮ್‌ ಚಿತ್ರ)   

ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅಭಿನಯದ ‘ಸುಖೀ’ ಸಿನಿಮಾದ ಪೋಸ್ಟರ್‌ ಅನ್ನು ಬಿಡುಗಡೆ ಮಾಡಲಾಗಿದೆ.

ಶಿಲ್ಪಾ, ಸಿನಿಮಾದ ಪೋಸ್ಟರ್‌ ಅನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು, ‘ನನ್ನ ಮುಂದಿನ ಸಿನಿಮಾ ಘೋಷಿಸಲು ಪುಳಕಿತಳಾಗಿರುವೆ’ ಎಂದು ಬರೆದುಕೊಂಡಿದ್ದಾರೆ.

ಅಬುಂಡಾಂಟಿಯಾ ಎಂಟರ್‌ಟೈನ್‌ಮೆಂಟ್ ಮತ್ತು ಟಿ-ಸೀರೀಸ್ ನಿರ್ಮಿಸಿರುವ ‘ಸುಖೀ’ ಚಿತ್ರವನ್ನು ಸೋನಾಲ್ ಜೋಷಿ ನಿರ್ದೇಶಿಸುತ್ತಿದ್ದಾರೆ.

ADVERTISEMENT

2021ರಲ್ಲಿ ತೆರೆಕಂಡಿದ್ದ ‘ಹಂಗಾಮಾ 2’ ಸಿನಿಮಾದ ಮೂಲಕ ಶಿಲ್ಪಾ ಶೆಟ್ಟಿ, 14 ವರ್ಷಗಳ ನಂತರ ಬೆಳ್ಳಿತೆರೆಗೆ ಮರಳಿದ್ದರು. ಪ್ರಸ್ತುತ ಅವರು ಜನಪ್ರಿಯ ರಿಯಾಲಿಟಿ ಶೋ ‘ಇಂಡಿಯಾಸ್ ಗಾಟ್ ಟ್ಯಾಲೆಂಟ್ ಸೀಸನ್ 9’ ರಲ್ಲಿ ತೀರ್ಪುಗಾರರಾಗಿ ಕಾಣಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.