ADVERTISEMENT

ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣ: ಶಿಲ್ಪಾ ಶೆಟ್ಟಿ ಹೇಳಿಕೆ ಪಡೆದ ಮುಂಬೈ ಪೊಲೀಸರು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ಜುಲೈ 2021, 15:17 IST
Last Updated 23 ಜುಲೈ 2021, 15:17 IST
ರಾಜ್ ಕುಂದ್ರಾ ಮತ್ತು ಶಿಲ್ಪಾ ಶೆಟ್ಟಿ (ಎಎಫ್‌ಪಿ ಚಿತ್ರ)
ರಾಜ್ ಕುಂದ್ರಾ ಮತ್ತು ಶಿಲ್ಪಾ ಶೆಟ್ಟಿ (ಎಎಫ್‌ಪಿ ಚಿತ್ರ)   

ಮುಂಬೈ: ಅಶ್ಲೀಲ ಚಿತ್ರ ನಿರ್ಮಾಣ ಮತ್ತು ಕೆಲವು ಆ್ಯಪ್‌ಗಳ ಮೂಲಕ ಅವುಗಳನ್ನು ಪ್ರಕಟಿಸಿದ ಪ್ರಕರಣಕ್ಕೆ ಸಂಬಂಧಿಸಿ ಮುಂಬೈ ಪೊಲೀಸರು ಉದ್ಯಮಿ ರಾಜ್ ಕುಂದ್ರಾ ಪತ್ನಿ, ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಅವರ ಹೇಳಿಕೆ ದಾಖಲಿಸಿಕೊಂಡಿದ್ದಾರೆ ಎಂದು ‘ಎಎನ್‌ಐ’ ಟ್ವೀಟ್ ಮಾಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ಕುಂದ್ರಾ ಅವರ ಪೊಲೀಸ್ ಕಸ್ಟಡಿಯನ್ನು ಜುಲೈ 27 ರವರೆಗೆ ಮುಂಬೈನ ನ್ಯಾಯಾಲಯ ವಿಸ್ತರಿಸಿತ್ತು.

ADVERTISEMENT

ಕುಂದ್ರಾ ಅವರನ್ನು ಜುಲೈ 19 ರ ರಾತ್ರಿ ಮುಂಬೈನ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದರು. ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಗೆ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಇಂದು (ಶುಕ್ರವಾರ) ಕುಂದ್ರಾ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ ಪೊಲೀಸರು, ಹೆಚ್ಚಿನ ತನಿಖೆಗಾಗಿ ಕಸ್ಟಡಿಗೆ ಒಪ್ಪಿಸುವಂತೆ ಮನವಿ ಮಾಡಿದ್ದರು.

ಈ ಮಧ್ಯೆ,ಕುಂದ್ರಾ ಬಂಧನವೇ ಕಾನೂನು ಬಾಹಿರ. ಇದರ ವಿರುದ್ಧ ಹೈಕೋರ್ಟ್‌ಗೆ ಹೋಗುತ್ತೇವೆ ಎಂದು ಕುಂದ್ರಾ ಅವರ ವಕೀಲ ಸುಭಾಷ್‌ ಜಾಧವ್‌ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.