ಮುಂಬೈ: 29 ಮಾಧ್ಯಮ ಸಿಬ್ಬಂದಿ ಮತ್ತು ಮಾಧ್ಯಮ ಸಂಸ್ಥೆಗಳ ವಿರುದ್ಧ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಬಾಂಬೆ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
ಪತಿ ರಾಜ್ ಕುಂದ್ರಾ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಕುರಿತು ಸುಳ್ಳು ಮತ್ತು ಚಾರಿತ್ರ್ಯ ಹರಣ ಮಾಡುವಂತಹ ಸುದ್ದಿಗಳನ್ನು ಪ್ರಸಾರ ಮಾಡಲಾಗಿದೆ ಎಂದು ಶಿಲ್ಪಾ ಶೆಟ್ಟಿ ಆರೋಪಿಸಿದ್ದಾರೆ.
ಕುಂದ್ರಾ ಅವರನ್ನು ಜುಲೈ 19ರ ರಾತ್ರಿ ಮುಂಬೈನ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದರು. ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಗೆ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.
ಈ ಪ್ರಕರಣದಲ್ಲಿ ಕುಂದ್ರಾ ಪ್ರಮುಖ ಆರೋಪಿಯಾಗಿದ್ದಾರೆ ಎಂದು ಮುಂಬೈ ಅಪರಾಧ ವಿಭಾಗದ ಪೊಲೀಸರು ಮಾಹಿತಿ ನೀಡಿದ್ದಾರೆ.
ಅಶ್ಲೀಲ ಚಿತ್ರ ತಯಾರಿಕೆ ಪ್ರಕರಣದಲ್ಲಿ ಶಿಲ್ಪಾ ಶೆಟ್ಟಿಯವರ ಪಾತ್ರ ಕಂಡುಬಂದಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಶಿಲ್ಪಾ ಶೆಟ್ಟಿ ಅವರನ್ನು ವಿವಾಹವಾಗುವುದಕ್ಕೂ ಮುಂಚೆ ರಾಜ್ ಕುಂದ್ರ ಕವಿತಾರನ್ನು ಮದುವೆಯಾಗಿ ಲಂಡನ್‌ನಲ್ಲಿ ನೆಲೆಸಿದ್ದರು. ಕವಿತಾಗೆ 2006ರಲ್ಲಿ ವಿಚ್ಛೇದನ ನೀಡಿ 2009ರಲ್ಲಿ ಶಿಲ್ಪಾ ಶೆಟ್ಟಿಯನ್ನು ಮದುವೆಯಾದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.