ADVERTISEMENT

ಎತ್ತರಕ್ಕೆ ಏರಲು ಬಯಸಿದ ಮಹಿಳೆಗಿಂತ ಪ್ರಬಲ ಶಕ್ತಿ ಮತ್ತೊಂದಿಲ್ಲ: ಶಿಲ್ಪಾ ಶೆಟ್ಟಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಆಗಸ್ಟ್ 2021, 12:50 IST
Last Updated 21 ಆಗಸ್ಟ್ 2021, 12:50 IST
ಶಿಲ್ಪಾ ಶೆಟ್ಟಿ
ಶಿಲ್ಪಾ ಶೆಟ್ಟಿ   

ಮುಂಬೈ: ಪತಿಯ ಬಂಧನವಾದ ನಂತರ ನಟಿ ಶಿಲ್ಪಾ ಶೆಟ್ಟಿ ಅವರು ಮೊದಲ ಬಾರಿಗೆ ತಮ್ಮ ಚಿತ್ರವೊಂದನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ.

'ಎತ್ತರಕ್ಕೆ ಏರಲು ತೀರ್ಮಾನಿಸಿದ ಮಹಿಳೆಗಿಂತ ಪ್ರಬಲ ಶಕ್ತಿ ಮತ್ತೊಂದಿಲ್ಲ' ಎಂಬ ಸಾಲನ್ನು ಚಿತ್ರದೊಂದಿಗೆ ಬರೆದುಕೊಂಡಿದ್ದಾರೆ.

ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ ಕುಂದ್ರಾ ಅವರನ್ನು ಜುಲೈ 19ರ ರಾತ್ರಿ ಮುಂಬೈನ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದರು. ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಗೆ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ADVERTISEMENT

ಈ ಪ್ರಕರಣದಲ್ಲಿ ಕುಂದ್ರಾ ಪ್ರಮುಖ ಆರೋಪಿಯಾಗಿದ್ದಾರೆ ಎಂದು ಮುಂಬೈ ಅಪರಾಧ ವಿಭಾಗದ ಪೊಲೀಸರು ಹೇಳಿದ್ದಾರೆ.

ಅಶ್ಲೀಲ ಚಿತ್ರ ತಯಾರಿಕೆ ಪ್ರಕರಣದಲ್ಲಿ ಶಿಲ್ಪಾ ಶೆಟ್ಟಿಯವರ ಪಾತ್ರ ಕಂಡುಬಂದಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಶಿಲ್ಪಾ ಶೆಟ್ಟಿ ಅವರನ್ನು ವಿವಾಹವಾಗುವುದಕ್ಕೂ ಮುಂಚೆ ರಾಜ್‌ ಕುಂದ್ರಾ ಕವಿತಾರನ್ನು ಮದುವೆಯಾಗಿ ಲಂಡನ್‌ನಲ್ಲಿ ನೆಲೆಸಿದ್ದರು. ಕವಿತಾಗೆ 2006ರಲ್ಲಿ ವಿಚ್ಛೇದನ ನೀಡಿ 2009ರಲ್ಲಿ ಶಿಲ್ಪಾ ಶೆಟ್ಟಿಯನ್ನು ಮದುವೆಯಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.