ADVERTISEMENT

ತಪ್ಪು ಮಾಡಿದ್ದೇನೆ.. ಆದರೂ ಪರವಾಗಿಲ್ಲ: ನಟಿ ಶಿಲ್ಪಾ ಶೆಟ್ಟಿಯ ಹೊಸ ಪೋಸ್ಟ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಆಗಸ್ಟ್ 2021, 5:56 IST
Last Updated 27 ಆಗಸ್ಟ್ 2021, 5:56 IST
ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ
ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ   

ತಪ್ಪು ಮಾಡಿದ್ದೇನೆ ಎಂದು ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹೇಳಿಕೊಂಡಿದ್ದಾರೆ.

ಈ ಕುರಿತು ಇನ್‌ಸ್ಟಾಗ್ರಾಮ್ ಸ್ಟೇಟಸ್‌ನಲ್ಲಿ ಬರೆದುಕೊಂಡಿರುವ ಅವರು, 'ತಪ್ಪು ಮಾಡಿದ್ದೇನೆ... ಆದರೂ, ಪರವಾಗಿಲ್ಲ' ಎಂದು ತಿಳಿಸಿದ್ದಾರೆ.

ಇದೇ ವೇಳೆ ಸೋಫಿಯಾ ಲೊರೆನ್ ಅವರ ಪುಸ್ತಕದಿಂದ ಆಯ್ದು ಸಾಲುಗಳನ್ನು ಶಿಲ್ಪಾ ಶೆಟ್ಟಿ ಹಂಚಿಕೊಂಡಿದ್ದಾರೆ.

ADVERTISEMENT

'ಪರಿಪೂರ್ಣ ಜೀವನಕ್ಕಾಗಿ ಪಾವತಿಸುವ ಬಾಕಿ ಮೊತ್ತಗಳೇ ತಪ್ಪುಗಳು. ಕೆಲವು ಸಾರಿ ತಪ್ಪುಗಳನ್ನು ಮಾಡದೆ ನಾವು ನಮ್ಮ ಜೀವನವನ್ನು ಆಸಕ್ತಿದಾಯಕವಾಗಿಸಲು ಸಾಧ್ಯವಿಲ್ಲ. ಆದರೆ ನಮ್ಮ ತಪ್ಪುಗಳು ಅಪಾಯಕಾರಿ ಅಥವಾ ಬೇರೆಯವರನ್ನು ನೋಯಿಸಬಾರದು ಎಂದು ನಾವು ಅಂದುಕೊಂಡಿರುತ್ತೇವೆ. ಆದರೆ, ಅಂತಹ ತಪ್ಪುಗಳು ಜೀವನದಲ್ಲಾಗುತ್ತವೆ' ಎಂಬ ಅರ್ಥದ ಸಾಲುಗಳುಳ್ಳ ಚಿತ್ರವನ್ನು ಶಿಲ್ಪಾ ಶೆಟ್ಟಿ ಹಂಚಿಕೊಂಡಿದ್ದಾರೆ.

ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ ಕುಂದ್ರಾ ಅವರನ್ನು ಜುಲೈ 19ರ ರಾತ್ರಿ ಮುಂಬೈನ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದರು. ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಗೆ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಈ ಪ್ರಕರಣದಲ್ಲಿ ಕುಂದ್ರಾ ಪ್ರಮುಖ ಆರೋಪಿಯಾಗಿದ್ದಾರೆ ಎಂದು ಮುಂಬೈ ಅಪರಾಧ ವಿಭಾಗದ ಪೊಲೀಸರು ಮಾಹಿತಿ ನೀಡಿದ್ದಾರೆ.

ಅಶ್ಲೀಲ ಚಿತ್ರ ತಯಾರಿಕೆ ಪ್ರಕರಣದಲ್ಲಿ ಶಿಲ್ಪಾ ಶೆಟ್ಟಿಯವರ ಪಾತ್ರ ಕಂಡುಬಂದಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಶಿಲ್ಪಾ ಶೆಟ್ಟಿ ಅವರನ್ನು ವಿವಾಹವಾಗುವುದಕ್ಕೂ ಮುಂಚೆ ರಾಜ್‌ ಕುಂದ್ರಾ ಕವಿತಾರನ್ನು ಮದುವೆಯಾಗಿ ಲಂಡನ್‌ನಲ್ಲಿ ನೆಲೆಸಿದ್ದರು. ಕವಿತಾಗೆ 2006ರಲ್ಲಿ ವಿಚ್ಛೇದನ ನೀಡಿ 2009ರಲ್ಲಿ ಶಿಲ್ಪಾ ಶೆಟ್ಟಿಯನ್ನು ಮದುವೆಯಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.