ADVERTISEMENT

ಶಿಲ್ಪಾ ಶೆಟ್ಟಿ- ರಾಜ್‌ ಕುಂದ್ರಾ ನಿವಾಸದ ಮೇಲೆ ಅಪರಾಧ ವಿಭಾಗದ ಅಧಿಕಾರಿಗಳ ದಾಳಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ಜುಲೈ 2021, 11:56 IST
Last Updated 23 ಜುಲೈ 2021, 11:56 IST
ರಾಜ್ ಕುಂದ್ರಾ ಮತ್ತು ಶಿಲ್ಪಾ ಶೆಟ್ಟಿ
ರಾಜ್ ಕುಂದ್ರಾ ಮತ್ತು ಶಿಲ್ಪಾ ಶೆಟ್ಟಿ    

ಅಶ್ಲೀಲ ಚಿತ್ರ ಪ್ರಕರಣದ ಹಿನ್ನೆಲೆಯಲ್ಲಿ ಅಪರಾಧ ವಿಭಾಗದ ಅಧಿಕಾರಿಗಳು ಶಿಲ್ಪಾ ಶೆಟ್ಟಿ- ರಾಜ್ ಕುಂದ್ರಾ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ.

ಮುಂಬೈನ ಜುಹೂ ಪ್ರದೇಶದಲ್ಲಿರುವ ಕುಂದ್ರಾ ನಿವಾಸದ ಮೇಲೆ ಅಧಿಕಾರಿಗಳಿಂದ ಶುಕ್ರವಾರ ದಾಳಿ ನಡೆದಿದೆ ಎಂದು ಸುದ್ದಿಸಂಸ್ಥೆ ಎಎನ್‌ಐವರದಿ ಮಾಡಿದೆ. ಈ ನಿವಾಸದಲ್ಲಿ ನಟಿ ಶಿಲ್ಪಾ ಶೆಟ್ಟಿ, ಅವರ ಪತಿ ರಾಜ್‌ ಕುಂದ್ರಾ ಮತ್ತು ಮಕ್ಕಳು ವಾಸಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಅಶ್ಲೀಲ ಚಿತ್ರಗಳನ್ನು ತಯಾರಿಸಿದ ಮತ್ತು ಆ್ಯಪ್‌ಗಳ ಮೂಲಕ ಅವುಗಳನ್ನು ಬಿತ್ತರಿಸಿದ ಆರೋಪದ ಮೇಲೆ ಉದ್ಯಮಿ ರಾಜ್ ಕುಂದ್ರಾ ಅವರನ್ನು ಮುಂಬೈ ಸ್ಥಳೀಯ ನ್ಯಾಯಾಲಯ ಜುಲೈ 27ರವರೆಗೆ ಪೊಲೀಸ್‌ ವಶಕ್ಕೆ ಒಪ್ಪಿಸಿದೆ.

ADVERTISEMENT

ರಾಜ್‌ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಸೋಮವಾರ ಬಂಧಿಸಿದ್ದರು. ಪೊಲೀಸರು ಮತ್ತೊಬ್ಬ ಆರೋಪಿ ರಿಯಾನ್‌ ಜಾನ್‌ನನ್ನು ಬಂಧಿಸಿದ್ದು ಆತನನ್ನು ಜುಲೈ 27ರವರೆಗೂ ನ್ಯಾಯಾಲಯ ಪೊಲೀಸ್‌ ವಶಕ್ಕೆ ಒಪ್ಪಿಸಿದೆ. ಕುಂದ್ರಾ ಹಾಗೂ ರಿಯಾನ್‌ನನ್ನು ಮುಂಬೈ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಈ ಪ್ರಕರಣದಲ್ಲಿ ಕುಂದ್ರಾ ಪ್ರಮುಖ ಆರೋಪಿಯಾಗಿದ್ದಾರೆ ಎಂದು ಮುಂಬೈ ಅಪರಾಧ ವಿಭಾಗದ ಪೊಲೀಸರು ಮಾಹಿತಿ ನೀಡಿದ್ದಾರೆ.

ಇವುಗಳನ್ನೂ ಓದಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.