ಶೈನ್ ಟಾಮ್ ಚಾಕೊ
ತಿರುವನಂತಪುರಂ/ಚೆನ್ನೈ: ಮಲಯಾಳಂ ನಟ ಶೈನ್ ಟಾಮ್ ಚಾಕೊ ಅವರ ತಂದೆ ರಸ್ತೆ ಅಪಘಾತದಲ್ಲಿ ಶುಕ್ರವಾರ ಬೆಳಗ್ಗೆ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಶೈನ್ ಟಾಮ್ ಚಾಕೊ ಅವರಿಗೆ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಾಕೊ ಕುಟುಂಬ ಕಾರಿನಲ್ಲಿ ತಮಿಳುನಾಡಿನ ಸೇಲಂನಿಂದ ಬೆಂಗಳೂರಿಗೆ ಪ್ರಯಾಣ ಬೆಳಸಿತ್ತು. ಧರ್ಮಪುರಿ ಸಮೀಪ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಚಾಕೊ, ಅವರ ತಂದೆ ಹಾಗೂ ಕಿರಿಯ ಸಹೋದರ ಇದ್ದರು.
ಚಾಕೊ ಅವರ ತಂದೆ ಸ್ಥಳದಲ್ಲೇ ಮೃತಪಟ್ಟರೆ, ಅವರ ಸಹೋದರ ಹಾಗೂ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಾಕೊ ಅವರ ಕುಟುಂಬ ಪ್ರಯಾಣಿಸುತ್ತಿದ್ದ ಕಾರು, ಮುಂದಿದ್ದ ಲಾರಿಯನ್ನು ಹಿಂದಿಕ್ಕಲು ಪ್ರಯತ್ನಿಸುವಾಗ ಈ ಅವಘಡ ಸಂಭವಿಸಿತು ಎಂದ ಅವರು ಹೇಳಿದ್ದಾರೆ.
ಡ್ರಗ್ಸ್ ಪ್ರಕರಣ ಹಾಗೂ ಸಹ ನಟಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ನಟ ಚಾಕೊ ಮೇಲೆ ಹಲವು ದೂರುಗಳು ದಾಖಲಾಗಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.