ADVERTISEMENT

‘ಗಿರ್ಕಿ’ ಪೋಸ್ಟರ್‌ ಬಿಡುಗಡೆ ಮಾಡಿದ ಶಿವಣ್ಣ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2022, 8:10 IST
Last Updated 2 ಏಪ್ರಿಲ್ 2022, 8:10 IST
‘ಗಿರ್ಕಿ’ ಪೋಸ್ಟರ್‌ ಬಿಡುಗಡೆ ಮಾಡಿದ ನಟ ಶಿವರಾಜ್‌ಕುಮಾರ್‌ ಅವರೊಂದಿಗೆ ಚಿತ್ರತಂಡ
‘ಗಿರ್ಕಿ’ ಪೋಸ್ಟರ್‌ ಬಿಡುಗಡೆ ಮಾಡಿದ ನಟ ಶಿವರಾಜ್‌ಕುಮಾರ್‌ ಅವರೊಂದಿಗೆ ಚಿತ್ರತಂಡ   

ಎದಿತ್ ಫಿಲಂ ಫ್ಯಾಕ್ಟರಿ ಮತ್ತು ವಾಸುಕಿ ಮೂವೀಸ್ ಸಹಯೋಗದೊಂದಿಗೆ ತರಂಗ ವಿಶ್ವ ನಿರ್ಮಿಸಿರುವ ‘ಗಿರ್ಕಿ’ ಚಿತ್ರದ ಮೋಷನ್ ಪೋಸ್ಟರನ್ನು ನಟ ಶಿವರಾಜ್ ಕುಮಾರ್ ಇತ್ತೀಚೆಗೆ ಬಿಡುಗಡೆ ಮಾಡಿದರು. ಎ2 ಮ್ಯೂಸಿಕ್‌ ಮೂಲಕ ಬಿಡುಗಡೆಯಾಗಿರುವ ಈ ಮೋಷನ್ ಪೋಸ್ಟರ್ ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಸದ್ಯದಲ್ಲೇ ಟೀಸರ್ ಬಿಡುಗಡೆಯಾಗಲಿದೆ. ಮೇಯಲ್ಲಿ ಚಿತ್ರ ತೆರೆಗೆ ಬರಲಿದೆ ಎಂದಿದೆ ಚಿತ್ರತಂಡ.

ಪ್ರೀತಿ, ಥ್ರಿಲ್ಲರ್ ಹಾಗೂ ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರವನ್ನು ವೀರೇಶ್ ಪಿ.ಎಂ. ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಸಹ ಇವರೇ ಬರೆದಿದ್ದಾರೆ. ಈ ಹಿಂದೆ ಯೋಗರಾಜ್ ಭಟ್ ಅವರೊಂದಿಗೆ ಕೆಲಸ ಮಾಡಿದ ಅನುಭವ ವೀರೇಶ್ ಪಿ.ಎಂ ಅವರಿಗಿದೆ.

ವಾಸುಕಿ ಭುವನ್ ಅವರ ಸಹ ನಿರ್ಮಾಣವಿರುವ ಈ ಚಿತ್ರಕ್ಕೆ ವೀರ್ ಸಮರ್ಥ್ ಸಂಗೀತ ನೀಡಿದ್ದಾರೆ‌. ಯೋಗರಾಜ್ ಭಟ್, ಜಯಂತ ಕಾಯ್ಕಿಣಿ, ವೀರೇಶ್‌ ಪಿ.ಎಂ. ಹಾಡುಗಳನ್ನು ಬರೆದಿದ್ದಾರೆ. ನವೀನ್ ಕುಮಾರ್ ಛಲ್ಲ ಛಾಯಾಗ್ರಹಣ, ಮಧು ತುಂಬಕೆರೆ ಅವರ ಸಂಕಲನವಿರುವ ಈ ಚಿತ್ರಕ್ಕೆ ವಿನೋದ್ ಮಾಸ್ಟರ್ ಸಾಹಸ ನಿರ್ದೇಶನ ಹಾಗೂ ರಾಮು, ಮೋಹನ್ ಅವರ ನೃತ್ಯ ನಿರ್ದೇಶನವಿದೆ.

ತಮ್ಮ ಕಾಮಿಡಿ ಮೂಲಕ ಮನೆಮಾತಾಗಿರುವ ತರಂಗ ವಿಶ್ವ ಹಾಗೂ ವಿಲೋಕ್ ರಾಜ್ ಚಿತ್ರದ ನಾಯಕರು. ದಿವ್ಯ ಉರುಡುಗ ಹಾಗೂ ರಾಶಿ ಮಹದೇವ್ ನಾಯಕಿಯರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.