ADVERTISEMENT

29 ವರ್ಷಗಳ ಬಳಿಕ ‘ಯಾಣ’ದಲ್ಲಿ ಶಿವಣ್ಣ: ‘ನಮ್ಮೂರ ಮಂದಾರ ಹೂವೇ’ ಶೂಟಿಂಗ್ ಮೆಲುಕು

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2025, 14:19 IST
Last Updated 2 ಫೆಬ್ರುವರಿ 2025, 14:19 IST
   

ಬೆಂಗಳೂರು: ಅಮೆರಿಕದಲ್ಲಿ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆದು ಗುಣಮುಖರಾಗಿ ಬಂದಿರುವ ಹ್ಯಾಟ್ರಿಕ್ ಹೀರೊ ಶಿವರಾಜ್‌ಕುಮಾರ್ ಅವರು, ಉತ್ತರಕನ್ನಡ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಯಾಣಕ್ಕೆ ಭೇಟಿ ನೀಡಿದ್ದಾರೆ.

29 ವರ್ಷಗಳ ಬಳಿಕ ಯಾಣಕ್ಕೆ ಭೇಟಿ ನೀಡಿರುವಶಿವರಾಜ್‌ಕುಮಾರ್, ಎಕ್ಸ್‌ ಪೋಸ್ಟ್‌ನಲ್ಲಿ ‘ನಮ್ಮೂರ ಮಂದಾರ ಹೂವೇ’ ಸಿನಿಮಾ ಶೂಟಿಂಗ್ ನೆನಪುಗಳನ್ನು ಮೆಲುಕು ಹಾಕಿದ್ದಾರೆ.

'ಬಾಳಿನ ಬೆನ್ನು ಹತ್ತಿ.. ನೂರಾರು ಊರು ಸುತ್ತಿ.. ಏನೇನೋ ಕಂಡ ಮೇಲೂ.. ನಮ್ಮೂರೇ ನಮಗೆ ಮೇಲೂ..‘ನಮ್ಮೂರ ಮಂದಾರ ಹೂವೇ’ ನಂತರ ಮತ್ತೆ ನನ್ನ ಯಾಣ ಭೇಟಿ 29 ವರ್ಷಗಳ ಬಳಿಕ‘ ಎಂದು ಬರೆದುಕೊಂಡಿದ್ದಾರೆ.

ADVERTISEMENT

ಚಿತ್ರೀಕರಣ ಸಂದರ್ಭದ ಚಿತ್ರವನ್ನೂ ಅವರು ಹಂಚಿಕೊಂಡಿದ್ದಾರೆ. ಈ ಚಿತ್ರದಲ್ಲಿ ಶಿವರಾಜ್‌ ಕುಮಾರ್ ಜೊತೆಗೆ ರಮೇಶ್ ಅರವಿಂದ್, ಪ್ರೇಮಾ ಸಹ ನಟಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.