ADVERTISEMENT

ಶಿವಣ್ಣ- ಉಪೇಂದ್ರ ಹೊಸ ಸಿನಿಮಾ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ಅಕ್ಟೋಬರ್ 2022, 6:50 IST
Last Updated 3 ಅಕ್ಟೋಬರ್ 2022, 6:50 IST
ಉಪೇಂದ್ರ, ಅರ್ಜುನ್‌ ಜನ್ಯಾ
ಉಪೇಂದ್ರ, ಅರ್ಜುನ್‌ ಜನ್ಯಾ   

‘ಓಂ’ನಂತಹ ಸೂಪರ್‌ ಹಿಟ್‌ ಚಿತ್ರವನ್ನು ನೀಡಿದ ಶಿವರಾಜ್‌ಕುಮಾರ್‌ ಹಾಗೂ ಉಪೇಂದ್ರ ಮತ್ತೊಂದು ಚಿತ್ರಕ್ಕಾಗಿ ಜೊತೆಯಾಗಿದ್ದಾರೆ. ಆದರೆ ಉಪೇಂದ್ರ ನಿರ್ದೇಶನ ಮಾಡುತ್ತಿಲ್ಲ, ಬದಲಿಗೆ ಅರ್ಜುನ್‌ ಜನ್ಯ ನಿರ್ದೇಶನದ ‘45’ ಚಿತ್ರದಲ್ಲಿ ಜೊತೆಯಾಗಿ ನಟಿಸುತ್ತಿದ್ದಾರೆ. ಗಾಳಿಪಟ–2ಭರ್ಜರಿ ಯಶಸ್ಸಿನ ಬಳಿಕ ನಿರ್ಮಾಪಕ ರಮೇಶ್‌ ರೆಡ್ಡಿ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ.

ಶಿವಣ್ಣ ಮತ್ತು ಉಪೇಂದ್ರ ಜೊತೆಯಾಗಿ ಕೆಲಸ ಮಾಡುತ್ತಿರುವುದು ಇದು ನಾಲ್ಕನೇ ಬಾರಿ. ‘ಓಂ’ ಚಿತ್ರದ ಬಳಿಕ ಇಬ್ಬರೂ ‘ಪ್ರೀತ್ಸೆ’ ಮತ್ತು ‘ಲವ-ಕುಶ’ ಚಿತ್ರದಲ್ಲಿ ಜೊತೆಯಾಗಿ ನಟಿಸಿದ್ದರು. ‌ಬಹಳ ವರ್ಷಗಳ ನಂತರ ಅವರಿಬ್ಬರೂ ‘45’ ಚಿತ್ರದಲ್ಲಿ ಮತ್ತೆ ಒಟ್ಟಾಗಿ ನಟಿಸಲಿದ್ದಾರೆ.

ಶಿವರಾಜ್‌ಕುಮಾರ್ ಅವರ ಹುಟ್ಟುಹಬ್ಬದಂದು ಅಧಿಕೃತವಾಗಿ ಘೋಷಣೆಯಾದ ‘45’, ಈಗ ಪ್ರಾರಂಭಿಕ ಹಂತದಲ್ಲಿದೆ. ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದ ಚಿತ್ರೀಕರಣವು ಡಿಸೆಂಬರ್‌ನಿಂದ ಅಧಿಕೃತವಾಗಿ ಪ್ರಾರಂಭವಾಗಲಿದೆ.

ADVERTISEMENT

ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಅವರೇ ಕಥೆ-ಚಿತ್ರಕಥೆ ಬರೆದಿದ್ದು, ನಿರ್ದೇಶನದ ಜೊತೆಗೆ ಸಂಗೀತ ನಿರ್ದೇಶನದ ಜವಾಬ್ದಾರಿಯನ್ನು ಹೊತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.