ADVERTISEMENT

ಶಿವರಾಜ್‌ ಕುಮಾರ್‌ ಅಭಿನಯದ 'ಭಜರಂಗಿ 2' ಸಿನಿಮಾ ಸೆಟ್‌ಗೆ ಬೆಂಕಿ, ಅಪಾಯ ಇಲ್ಲ

​ಪ್ರಜಾವಾಣಿ ವಾರ್ತೆ
Published 16 ಜನವರಿ 2020, 7:58 IST
Last Updated 16 ಜನವರಿ 2020, 7:58 IST
   

ಬೆಂಗಳೂರು: ಶಿವರಾಜ್‌ ಕುಮಾರ್‌ ಅಭಿನಯದ ಬಹುನಿರೀಕ್ಷಿತ ಚಿತ್ರ 'ಭಜರಂಗಿ 2‘ ಸಿನಿಮಾ ಸೆಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಯಾವುದೇ ಅಪಾಯ ಸಂಭವಿಸಿಲ್ಲ ಎಂದು ಚಿತ್ರತಂಡ ಹೇಳಿದೆ.

1 ಕೋಟಿ ರೂಪಾಯಿ ವೆಚ್ಚದ ಗುಹೆ ಸೆಟ್‌ನಲ್ಲಿ ಶೂಟಿಂಗ್‌ ನಡೆಯುತ್ತಿತ್ತು. ಸೆಟ್‌ನ ಮೇಲಿನ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕೂಡಲೇ ನಂದಿಸಲಾಯಿತು ಎಂದು ಚಿತ್ರದ ನಿರ್ದೇಶಕ ಹರ್ಷ ತಿಳಿಸಿದ್ದಾರೆ. ಲೈಟ್‌ಗಳ ಬಿಸಿಯಿಂದಾಗಿಬೆಂಕಿ ಕಾಣಿಸಿಕೊಂಡಿರಬಹುದು ಎಂದು ಹೇಳಿದ್ದಾರೆ.

ಖಾಸಗಿ ಸುದ್ದಿ ವಾಹಿನಿಗೆ ಪ್ರತಿಕ್ರಿಯೆ ನೀಡಿದ ನಟ ಶಿವರಾಜ್‌ ಕುಮಾರ್‌ ಯಾವುದೇ ಹಾನಿ ಸಂಭವಿಸಿಲ್ಲ ಎಂದು ಹೇಳಿದ್ದಾರೆ. ಇಂದು ಶೂಟಿಂಗ್‌ ನಿಲ್ಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ADVERTISEMENT

ಬೆಂಕಿ ಕಾಣಿಸಿಕೊಂಡ ಸಮಯದಲ್ಲಿ ಶಿವರಾಜ್‌ ಕುಮಾರ್‌ ಸೇರಿದಂತೆ 100ಕ್ಕೂ ಹೆಚ್ಚು ಜನರು ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.