
ಪ್ರಜಾವಾಣಿ ವಾರ್ತೆಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ನಟನೆಯ ‘45’ ಸಿನಿಮಾದ ಟ್ರೇಲರ್‌ಗೆ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ. ನಿನ್ನೆ (ಡಿಸೆಂಬರ್ 15) ಸಂಜೆ 6.45ಕ್ಕೆ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಏಕಕಾಲಕ್ಕೆ 7 ಜಿಲ್ಲೆಯಲ್ಲಿ ‘45’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ಟ್ರೇಲರ್ ಬಿಡುಗಡೆಯಾದ ನಂತ ಮಾತನಾಡಿದ ರಾಜ್ ಬಿ ಶೆಟ್ಟಿ ಅವರು, ನಮ್ಮ ಕನ್ನಡ ಸಿನಿಮಾಗಳು ಪರಭಾಷಕಿಕರಿಗೆ ಹಾವಳಿ ಕೊಡುವಂತೆ ಆಗಬೇಕು. ನಮ್ಮ ಸಿನಿಮಾ 45 ಹಾವಳಿ ಕೊಡುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದರು. ಹಾಗೆಯೇ ಸು ಫ್ರಂ ಸೋ ಚಿತ್ರದ ಗಳಿಕೆಯ ಮೊದಲ ಅದೃಷ್ಟದ ಹಣವನ್ನು ನಿರ್ದೇಶಕ ಅರ್ಜುನ್ ಜನ್ಯ ಹಾಗೂ ನಿರ್ಮಾಕ ರಮೇಶ್ ರೆಡ್ಡಿ ಅವರಿಗೆ ಕೊಟ್ಟು ಚಿತ್ರದ ಯಶಸ್ಸಿಗೆ ಹಾರೈಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.