ADVERTISEMENT

ಶಿವರಾಜ್‍ಕುಮಾರ್‌ ಅಭಿನಯದ ‘ಡ್ಯಾಡ್‍’ ಚಿತ್ರದ ಮೊದಲ ಹಂತ ಮುಕ್ತಾಯ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2025, 0:30 IST
Last Updated 27 ಆಗಸ್ಟ್ 2025, 0:30 IST
ಶಿವರಾಜ್‌ಕುಮಾರ್‌
ಶಿವರಾಜ್‌ಕುಮಾರ್‌   

ಶಿವರಾಜ್‍ಕುಮಾರ್‌ ನಾಯಕನಾಗಿ ನಟಿಸುತ್ತಿರುವ ‘ಡ್ಯಾಡ್‍’ ಚಿತ್ರದ ಮೊದಲ ಹಂತದ ಚಿತ್ರೀಕರಣ ಇತ್ತೀಚೆಗಷ್ಟೇ ಮೈಸೂರಿನಲ್ಲಿ ಮುಕ್ತಾಯಗೊಂಡಿದೆ. ತೆಲುಗಿನ ಖ್ಯಾತ ನಿರ್ದೇಶಕ ಅನಿಲ್‍ ಕನ್ನೆಗಂಟಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಹರೀಶ್‍ ಪೆದ್ದಿ ಅವರು ಮೈರಾ ಕ್ರಿಯೇಷನ್ಸ್ ಲಾಂಛನದಡಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. 

‘ಶಿವರಾಜ್‍ಕುಮಾರ್ ಅವರು ಅನೇಕ ವರ್ಷಗಳ ನಂತರ ಈ ಚಿತ್ರದಲ್ಲಿ ವೈದ್ಯನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಶರ್ಮಿಳಾ ಮಾಂಡ್ರೆ, ಬೇಬಿ ನಕ್ಷತ್ರ, ಬಾಬು, ಮಲಯಾಳ ನಟ ಸೂರಜ್‍ ವೆಂಜರಮೂಡು ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

‘ತಂದೆ ಮತ್ತು ಮಗಳ ಕಥೆ ಹೊಂದಿರುವ ಚಿತ್ರ. ಅಪ್ಪನ ಪಾತ್ರದಲ್ಲಿ ಶಿವರಾಜ್ ಕುಮಾರ್ ನಟಿಸುತ್ತಿದ್ದಾರೆ. ನಕ್ಷತ್ರ ಹೆಸರಿನ ಬಾಲ ನಟಿ ಮಗಳ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮೈಸೂರು ಮತ್ತು ಬೆಂಗಳೂರು ಸುತ್ತಮುತ್ತ ಬಹುಭಾಗ ಚಿತ್ರೀಕರಣಗೊಳ್ಳಲಿದ್ದು, ಶೀಘ್ರದಲ್ಲಿಯೇ ಎರಡನೇ ಹಂತದ ಚಿತ್ರೀಕರಣ ಪ್ರಾರಂಭಗೊಳ್ಳಲಿದೆ’ ಎಂದಿದೆ ಚಿತ್ರತಂಡ. 

ADVERTISEMENT

ಕನ್ನಡ, ತೆಲುಗು ಮತ್ತು ಮಲಯಾಳದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಅರ್ಜುನ್‍ ಜನ್ಯ ಸಂಗೀತ ನಿರ್ದೇಶನ ಹಾಗೂ ಬಿ.ರಾಜಶೇಖರ್ ಅವರ ಛಾಯಾಚಿತ್ರಗ್ರಹಣವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.