ಬೆಂಗಳೂರು: ‘ಕಾಂತಾರ’ ಸಿನಿಮಾದ ವಿಡಿಯೊ ಸಾಂಗ್ ಬಿಡುಗಡೆಯಾಗಿದ್ದು ಸಾಮಾಜಿಕ ಮಾಧ್ಯಮಗಳಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ.
ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿರುವ ‘ಸಿಂಗಾರ ಸಿರಿಯೆ‘ ಹಾಡು ಲಕ್ಷಾಂತರ ವೀಕ್ಷಣೆ ಕಂಡಿದೆ. ನಾಯಕ ರಿಷಬ್ ಹಾಗೂ ನಾಯಕಿ ಸಪ್ತಮಿ ಗೌಡ ಅವರ ಅಭಿನಯ ಮೆಚ್ಚುಗೆಗೆ ಪಾತ್ರವಾಗಿದೆ. ಈ ರೊಮ್ಯಾಂಟಿಕ್ ಹಾಡನ್ನು ಸಾಕಷ್ಟು ಜನ ನೆಟ್ಟಿಗರು ಇಷ್ಟಪಟ್ಟಿದ್ದಾರೆ.
ಹಾಡಿನ ಸಾಹಿತ್ಯ, ಸಂಗೀತಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
‘ಕಾಂತಾರ’ಹೊಂಬಾಳೆ ಫಿಲ್ಮ್ಸ್‌ನ 11ನೇ ಚಿತ್ರವಾಗಿದೆ. ಈ ಚಿತ್ರವನ್ನು ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸುತ್ತಿದ್ದಾರೆ. ಸಪ್ತಮಿಗೌಡ ಚಿತ್ರದ ನಾಯಕಿ. ಅಚ್ಯುತಕುಮಾರ್, ಕಿಶೋರ್ ಕುಮಾರ್ ಹಾಗೂ ಪ್ರಮೋದ್ ಶೆಟ್ಟಿ ಮುಖ್ಯ ಪಾತ್ರಗಳಲ್ಲಿದ್ದಾರೆ.
ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಅರವಿಂದ್ ಕಶ್ಯಪ್ ಅವರ ಛಾಯಾಗ್ರಹಣವಿದೆ. ಈ ವರ್ಷಾಂತ್ಯಕ್ಕೆ ಚಿತ್ರ ನಿರ್ಮಾಣ ಮುಕ್ತಾಯಗೊಳ್ಳಲಿದೆ ಎಂದು ಹೊಂಬಾಳೆ ಫಿಲ್ಮ್ಸ್ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.