ಪ್ರಣಮ್ ದೇವರಾಜ್ ನಾಯಕನಾಗಿ ನಟಿಸಿರುವ ‘S\O ಮುತ್ತಣ್ಣ’ ಆಗಸ್ಟ್ 22ರಂದು ತೆರೆಗೆ ಬರಲಿದೆ. ಈ ಚಿತ್ರಕ್ಕೆ ಶ್ರೀಕಾಂತ್ ಹುಣಸೂರು ನಿರ್ದೇಶನವಿದೆ.
‘ಅಪ್ಪ-ಮಗನ ಬಾಂಧವ್ಯದ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ರಂಗಾಯಣ ರಘು ಹಾಗೂ ಪ್ರಣಮ್ ದೇವರಾಜ್ ತಂದೆ-ಮಗನಾಗಿ ಕಾಣಿಸಿಕೊಂಡಿದ್ದಾರೆ. ಮನಸಿಗೆ ಹತ್ತಿರವಾಗುವ ಕೌಟುಂಬಿಕ ಕಥಾ ಹಂದರ ಹೊಂದಿರುವ ಚಿತ್ರವಿದು. ‘ಕಮಂಗಿ ನನ್ನ ಮಗನೆ’ ಹಾಡು ಈಗಾಗಲೇ ಜನಮನ ಗೆದ್ದಿದೆ. ಟೀಸರ್ ಕೂಡ ಮೆಚ್ಚುಗೆ ಪಡೆದಿದೆ. ಆಗಸ್ಟ್ ಮೊದಲ ವಾರದಲ್ಲಿ ಚಿತ್ರವನ್ನು ಅಮೆರಿಕ ಹಾಗೂ ದುಬೈನಲ್ಲಿ ಬಿಡುಗಡೆ ಮಾಡುವ ಸಿದ್ಧತೆ ನಡೆಸಿದ್ದೇವೆ’ ಎಂದು ನಿರ್ದೇಶಕರು ತಿಳಿಸಿದ್ದಾರೆ.
ಪುರಾತನ ಫಿಲ್ಮ್ಸ್ ಬಂಡವಾಳ ಹೂಡಿದೆ. ‘ದಿಯಾ’ ಖ್ಯಾತಿಯ ಖುಷಿ ರವಿ ನಾಯಕಿ. ಸುಚೇಂದ್ರ ಪ್ರಸಾದ್, ಗಿರೀಶ್ ಶಿವಣ್ಣ, ತಬಲ ನಾಣಿ, ಶ್ರೀನಿವಾಸ್ ಪ್ರಭು, ಸುಧಾ ಬೆಳವಾಡಿ, ಅರುಣ್ ಚಕ್ರವರ್ತಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಸಚಿನ್ ಬಸ್ರೂರು ಸಂಗೀತವಿರುವ ಹಾಡುಗಳನ್ನು ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ, ಪ್ರಮೋದ್ ಮರವಂತೆ ಬರೆದಿದ್ದಾರೆ. ಸ್ಕೇಟಿಂಗ್ ಕೃಷ್ಣ ಛಾಯಾಚಿತ್ರಗ್ರಹಣ ಹಾಗೂ ಹರೀಶ್ ಕೊಮ್ಮೆ ಸಂಕಲನವಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.