ಸೋನು ನಿಗಮ್
ಬೆಂಗಳೂರು: ಕನ್ನಡ ಹಾಡಿಗಾಗಿ ಒತ್ತಾಯ ಮಾಡಿದಾಗ ಅದನ್ನು ಪಹಲ್ಗಾಮ್ ದಾಳಿಗೆ ತಳುಕು ಹಾಕಿ ಕನ್ನಡಿಗರಿಂದ ಭಾರಿ ವಿರೋಧ ಎದುರಿಸಿದ ಗಾಯಕ ಸೋನು ನಿಗಮ್ ಕ್ಷಮೆ ಯಾಚಿಸಿದ್ದಾರೆ.
ಈ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಅವರು ಪೋಸ್ಟ್ ಮಾಡಿದ್ದಾರೆ.
’Sorry Karnataka, ನಿಮ್ಮ ಮೇಲಿನ ನನ್ನ ಪ್ರೀತಿ ಅಹಂಗಿಂತ ದೊಡ್ಡದು. ಯಾವಾಗಲೂ ನಿಮ್ಮನ್ನು ಪ್ರೀತಿಸುವೆ’ ಎಂದು ಬರೆದುಕೊಂಡಿದ್ದಾರೆ.
ಖಾಸಗಿ ಸಂಸ್ಥೆಯೊಂದು ಆಯೋಜಿಸಿದ್ದ ಸಂಗೀತ ಕಾರ್ಯಕ್ರಮದಲ್ಲಿ ಸೋನು ನಿಗಮ್ ಕನ್ನಡ ಕುರಿತು ಆಡಿದ ಮಾತು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಯುವಕನೊಬ್ಬ ಕನ್ನಡ ಹಾಡಿಗಾಗಿ ಒತ್ತಾಯ ಮಾಡಿದಾಗ ಅದನ್ನು ಪಹಲ್ಗಾಮ್ ದಾಳಿಗೆ ತಳಕು ಹಾಕಿ ಗಾಯಕ ಮಾತನಾಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ.
ಕನ್ನಡ ಹಾಡಿಗಾಗಿ ಒತ್ತಾಯ ಮಾಡಿದ್ದನ್ನು ಪಹಲ್ಗಾಮ್ ಭಯೋತ್ಪಾದನಾ ದಾಳಿಗೆ ತಳುಕು ಹಾಕಿದ ಗಾಯಕ ಸೋನು ನಿಗಮ್‌ಗೆ ಅಸಹಕಾರ ತೋರಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು(ಕೆಎಫ್‌ಸಿಸಿ) ನಿರ್ಧರಿಸಿದೆ. ಯಾರೂ ಸೋನು ನಿಗಮ್ ಅವರನ್ನು ಹಾಡಿಸಲು ಕರೆಯಬಾರದು, ಮ್ಯೂಸಿಕಲ್ ನೈಟ್ ಸೇರಿದಂತೆ ಅವರ ಜೊತೆಗೆ ಯಾವುದೇ ಚಟುವಟಿಕೆ ಮಾಡಕೂಡದು ಎಂದು ಮಂಡಳಿ ಅಧ್ಯಕ್ಷ ನರಸಿಂಹಲು ಎಂ. ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.