ADVERTISEMENT

ಎಸ್‌ಪಿ ಬಾಲಸುಬ್ರಮಣ್ಯಂ ಹುಟ್ಟುಹಬ್ಬದ ಸಂಭ್ರಮಕ್ಕೆ ಟ್ವೀಟ್ ಶುಭಾಶಯ

​ಪ್ರಜಾವಾಣಿ ವಾರ್ತೆ
Published 4 ಜೂನ್ 2020, 5:47 IST
Last Updated 4 ಜೂನ್ 2020, 5:47 IST
ಎಸ್‌ಪಿ ಬಾಲಸುಬ್ರಮಣ್ಯಂ (ಪ್ರಜಾವಾಣಿ ಚಿತ್ರ)
ಎಸ್‌ಪಿ ಬಾಲಸುಬ್ರಮಣ್ಯಂ (ಪ್ರಜಾವಾಣಿ ಚಿತ್ರ)   

ಬೆಂಗಳೂರು: ಖ್ಯಾತ ಗಾಯಕ, ಸಂಗೀತ ನಿರ್ದೇಶಕ ಎಸ್‌.ಪಿ ಬಾಲಸುಬ್ರಮಣ್ಯಂ ಅವರಿಗಿಂದು 74ನೇ ಹುಟ್ಟುಹಬ್ಬದ ಸಂಭ್ರಮ. ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿ ಸೇರಿದಂತೆ ಭಾರತದ 15 ಭಾಷೆಗಳಲ್ಲಿ ಸುಮಾರು 40,000ಕ್ಕಿಂತಲೂ ಹೆಚ್ಚು ಹಾಡುಗಳನ್ನು ಹಾಡಿರುವ ಗಾಯಕ ಎಸ್‌ಪಿಬಿ.

ತಮ್ಮ ಇಷ್ಟದಗಾಯಕನಹುಟ್ಟುಹಬ್ಬಕ್ಕೆ ಅಭಿಮಾನಿಗಳು ಟ್ವಿಟರ್‌ನಲ್ಲಿ ಶುಭಕೋರಿದ್ದು #SPBalasubrahmanyam ಹ್ಯಾಷ್‌ಟ್ಯಾಗ್ ಟ್ರೆಂಡ್ ಆಗಿದೆ.

ಉತ್ತಮ ಹಿನ್ನಲೆ ಗಾಯನಕ್ಕಾಗಿ 6 ಬಾರಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆದಿರುವ ಎಸ್‌ಪಿಬಿ, ಬಾಲಿವುಡ್ ಫಿಲ್ಮ್ ಫೇರ್ ಪ್ರಶಸ್ತಿ ಮತ್ತು 6 ಬಾರಿ ಫಿಲ್ಮ್ ಫೇರ್ ಪ್ರಶಸ್ತಿ (ಸೌತ್) ಪಡೆದಿದ್ದಾರೆ.2001ರಲ್ಲಿ ಪದ್ಮ ಶ್ರೀ ಮತ್ತು 2011ರಲ್ಲಿ ಪದ್ಮ ಭೂಷಣ ಪ್ರಶಸ್ತಿ ನೀಡಿ ಇವರನ್ನು ಗೌರವಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.