ADVERTISEMENT

‘ಸ್ಪಾರ್ಕ್‌’ ಟೀಸರ್‌ ಬಿಡುಗಡೆ: ನಾಯಕನಾದ ಉಪೇಂದ್ರ ಅಣ್ಣನ ಮಗ ನಿರಂಜನ್‌ ಸುಧೀಂದ್ರ

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2025, 23:30 IST
Last Updated 25 ಆಗಸ್ಟ್ 2025, 23:30 IST
   

ನಟ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್‌ ಸುಧೀಂದ್ರ ನಟನೆಯ ‘ಸ್ಪಾರ್ಕ್‌’ ಸಿನಿಮಾದ ಟೀಸರ್‌ ಬಿಡುಗಡೆಯಾಗಿದೆ. ನಟ ‘ನೆನಪಿರಲಿ’ ಪ್ರೇಮ್‌ ಈ ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. 

ಹಲವು ಸಿನಿಮಾಗಳಲ್ಲಿ ಸಹ ನಿರ್ದೇಶಕರಾಗಿ ಕೆಲಸ ಮಾಡಿದ ಅನುಭವವಿರುವ ಡಿ.ಮಹಾಂತೇಶ್‌ ಹಂದ್ರಾಳ್‌ ಆ್ಯಕ್ಷನ್‌ ಕಟ್‌ ಹೇಳಿರುವ ಈ ಸಿನಿಮಾದಲ್ಲಿ ಪತ್ರಕರ್ತನಾಗಿ ನಿರಂಜನ್‌ ಬಣ್ಣ ಹಚ್ಚಿದ್ದಾರೆ. ಒಂದು ಹಗರಣದ ಸುತ್ತ ಸಾಗುವ ಕಥೆಯನ್ನು ಸಿನಿಮಾದಲ್ಲಿ ಕಟ್ಟಿಕೊಡಲಾಗಿದ್ದು, ಸತ್ಯಕ್ಕಾಗಿ ನಿರಂಜನ್ ಹೋರಾಟ ಹೇಗಿದೆ ಎನ್ನುವುದನ್ನು ಟೀಸರ್‌ನಲ್ಲಿ ತೋರಿಸಲಾಗಿದೆ. 

‘ಸ್ಪಾರ್ಕ್ ಎಲ್ಲರ ಮನಸ್ಸಿನಲ್ಲಿರುವ ಕಿಡಿ. ಏನೇ ಹಗರಣ ನಡೆದರೂ ಮೊದಲು ಧ್ವನಿ ಎತ್ತುವುದು‌ ಪತ್ರಕರ್ತರು. ನಾನೂ ಇಂಥ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಇದು ದೊಡ್ಡ ಜವಾಬ್ದಾರಿ. ಇದರಲ್ಲಿ ಬರವಣಿಗೆ ತುಂಬಾ ಗಟ್ಟಿಯಾಗಿದೆ’ ಎಂದರು ನಿರಂಜನ್‌. 

ADVERTISEMENT

‘ನಾನು ಇಂಡಸ್ಟ್ರಿಗೆ ಮಾಸ್ ಹೀರೋ ಅಗಬೇಕು ಎಂದು ಬಂದೆ. ಆದರೆ ಸತತ ಲವ್ ಸ್ಟೋರಿ ಸಿನಿಮಾ ಮಾಡಿ ಅದು ಹಿಟ್ ಆಗಿ ನನ್ನ ಕ್ಲಾಸ್ ಹೀರೋ ಎಂದು ಗುರುತಿಸಿದರು. ನನ್ನಲ್ಲಿರುವ ಸ್ಪಾರ್ಕ್ ನೋಡಿ ಮಹಾಂತೇಶ್ ನನಗೆ ಈ ಮಾಸ್ ಪಾತ್ರ ನೀಡಿದ್ದಾರೆ’ ಎಂದು ಪ್ರೇಮ್‌ ಹೇಳಿದರು. 

ಚಿತ್ರದಲ್ಲಿ ನಾಯಕಿಯಾಗಿ ರಚನಾ ಇಂದರ್ ಅಭಿನಯಿಸಿದ್ದು, ಡಾ. ಗರಿಮಾ ಅವಿನಾಶ್ ವಸಿಷ್ಠ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.