ADVERTISEMENT

ಬೇಹುಗಾರಿಕೆ ಆರೋಪ: 'ಖ್ಯಾತ' ನಟನಿಗೆ ಕಂಗನಾ ಎಚ್ಚರಿಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಫೆಬ್ರುವರಿ 2023, 10:02 IST
Last Updated 6 ಫೆಬ್ರುವರಿ 2023, 10:02 IST
ನಟಿ ಕಂಗನಾ ರನೌತ್
ನಟಿ ಕಂಗನಾ ರನೌತ್   

ಮುಂಬೈ: ಬಾಲಿವುಡ್‌ ನಟಿ ಕಂಗನಾ ರನೌತ್ ಒಂದಲ್ಲಾ ಒಂದು ಕಾರಣಕ್ಕೆ ಸದಾ ಸುದ್ದಿಯಲ್ಲಿರುತ್ತಾರೆ. ಈ ಹಿಂದೆ ತಮ್ಮ ಮೇಲೆ ಬೇಹುಗಾರಿಕೆ ನಡೆಸಿದ್ದ ಆರೋಪದಡಿ 'ಖ್ಯಾತ' ನಟರೊಬ್ಬರಿಗೆ ಇದೀಗ ಎಚ್ಚರಿಕೆ ನೀಡಿದ್ದಾರೆ.

ಕಂಗನಾ ಸೋಮವಾರ ಹಂಚಿಕೊಂಡಿರುವ ಇನ್‌ಸ್ಟಾಗ್ರಾಮ್‌ ಸ್ಟೋರಿಯಲ್ಲಿ ಆ ನಟನ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಪಾಪರಾಜಿಗಳು ನಿರಂತರ ಬೇಹುಗಾರಿಕೆ ನಿಲ್ಲಿಸಿವೆ ಎಂದು ಅಭಿಮಾನಿಗಳಿಗೆ ತಿಳಿಸಿದ್ದಾರೆ.

ಕಳೆದ ರಾತ್ರಿಯಿಂದ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳು ಕಂಡುಬರುತ್ತಿಲ್ಲ. ಕ್ಯಾಮೆರಾಗಳು ಸೇರಿದಂತೆ ಯಾರೂ ನನ್ನನ್ನು ಹಿಂಬಲಿಸುತ್ತಿಲ್ಲ ಎಂದು ಬರೆದುಕೊಂಡಿದ್ದಾರೆ.

ADVERTISEMENT

ನಟನನ್ನು ಗುರಿಯಾಗಿಸಿ ಪೋಸ್ಟ್ ಹಾಕಿರುವ ಕಂಗನಾ, ನೀವು ಬೇರೆಯವರೊಂದಿಗೆ ನಡೆದುಕೊಳ್ಳುವ ರೀತಿ ಸರಿಯಿಲ್ಲ. ಮೊದಲು ಜನರೊಂದಿಗೆ ವರ್ತಿಸುವುದನ್ನು ಕಲಿಯಿರಿ ಎಂದು ಕಟುವಾಗಿ ಹೇಳಿದ್ದಾರೆ.

ನನ್ನನ್ನು ಹುಚ್ಚಿ ಎಂದು ಭಾವಿಸುವವರಿಗೆ, ನನ್ನ ಹುಚ್ಚುತನದ ಬಗ್ಗೆ ಅರಿವಿಲ್ಲ ಎಂದು ಎಚ್ಚರಿಕೆಯ ಧಾಟಿಯಲ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.