ADVERTISEMENT

ಡಿಸೆಂಬರ್‌ಗೆ ತೆರೆಗೆ ಬರಲು ‘ಮದಗಜ’ದ ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2021, 7:43 IST
Last Updated 8 ಸೆಪ್ಟೆಂಬರ್ 2021, 7:43 IST
ಶ್ರೀಮುರುಳಿ
ಶ್ರೀಮುರುಳಿ    

ಎಸ್‌.ಮಹೇಶ್‌ ಕುಮಾರ್‌ ಆ್ಯಕ್ಷನ್‌ ಕಟ್‌ ಹೇಳಿರುವ, ಶ್ರೀಮುರುಳಿ ಹಾಗೂ ಆಶಿಕಾ ರಂಗನಾಥ್‌ ನಟನೆಯ ‘ಮದಗಜ’ ಚಿತ್ರದ ಚಿತ್ರೀಕರಣ ಇತ್ತೀಚೆಗಷ್ಟೇ ಪೂರ್ಣಗೊಂಡಿದ್ದು, ಡಿಸೆಂಬರ್‌ನಲ್ಲಿ ಚಿತ್ರ ಬಿಡುಗಡೆಗೆ ಚಿತ್ರತಂಡ ಸಿದ್ಧತೆ ನಡೆಸಿದೆ.

ಚಿತ್ರದ ಪೋಸ್ಟ್‌ ಪ್ರೊಡಕ್ಷನ್‌ ಆರಂಭವಾಗಿದೆ. ಈ ಕುರಿತು ಮಹೇಶ್‌ ಅವರು ಇನ್‌ಸ್ಟಾಗ್ರಾಂನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಆಗಸ್ಟ್‌ನಲ್ಲೇ ಚಿತ್ರದ ಬಿಡುಗಡೆಗೆ ಚಿತ್ರತಂಡ ನಿರ್ಧರಿಸಿತ್ತು. ಆದರೆ ಲಾಕ್‌ಡೌನ್‌ ಕಾರಣದಿಂದ ಚಿತ್ರೀಕರಣವೇ ವಿಳಂಬವಾಗಿತ್ತು. ಜುಲೈ 15ಕ್ಕೆ ಅಂತಿಮ ಹಂತದ ಚಿತ್ರೀಕರಣ ಆರಂಭಿಸಿದ್ದ ಚಿತ್ರತಂಡ ಅದ್ಧೂರಿಯಾದ ಮೂರು ಸೆಟ್‌ನಲ್ಲಿ ನಾಯಕನನ್ನು ಪರಿಚಯಿಸುವ ಹಾಡಿನ ಚಿತ್ರೀಕರಣ ನಡೆಸಿತ್ತು. ಈ ಚಿತ್ರದ ಮೂಲಕ ಮೊದಲ ಬಾರಿಗೆ ಶ್ರೀಮುರುಳಿ ಹಾಗೂ ಆಶಿಕಾ ಜೋಡಿಯಾಗಿ ತೆರೆಯ ಮೇಲೆ ಕಾಣಿಸಿಕೊಳ್ಳುತ್ತಿದ್ದು,ಆಶಿಕಾ, ಹಳ್ಳಿ ಹುಡುಗಿಯ ಪಾತ್ರ ನಿರ್ವಹಿಸಿದ್ದಾರೆ.

ತೆಲುಗಿನ ಖ್ಯಾತ ನಟ ಜಗಪತಿ ಬಾಬು ಖಳನಾಯಕನಾಗಿ, ಹಾಸ್ಯ ನಟರಾದ ರಂಗಾಯಣ ರಘು, ಚಿಕ್ಕಣ್ಣ, ಶಿವರಾಜ್‌ ಕೆ.ಆರ್‌.ಪೇಟೆ ಈ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ. ಚಿತ್ರಕ್ಕೆ ರವಿ ಬಸ್ರೂರು ಸಂಗೀತ ನಿರ್ದೇಶನವಿದ್ದು, ಉಮಾಪತಿ ಶ್ರೀನಿವಾಸಗೌಡ ಈ ಚಿತ್ರದ ನಿರ್ಮಾಪಕರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.