
ಎಸ್.ಎಸ್. ರಾಜಮೌಳಿ, ಮಹೇಶ್ ಬಾಬು
ಹೈದರಾಬಾದ್: ನಿರ್ದೇಶಕ ಎಸ್.ಎಸ್. ರಾಜಮೌಳಿ ನಿರ್ದೇಶನದ ಮಹೇಶ್ ಬಾಬು ಹಾಗೂ ಪ್ರಿಯಾಂಕಾ ಚೋಪ್ರಾ ನಟನೆಯ ಮುಂದಿನ ಸಿನಿಮಾ ‘ವಾರಾಣಸಿ’ಯ ಶೀರ್ಷಿಕೆ ಹಾಗೂ ಟೀಸರ್ ಅನ್ನು ರಾಮೋಜಿ ಫಿಲ್ಮ್ ಸಿಟಿಯಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಬಿಡುಗಡೆ ಮಾಡಲಾಗಿದೆ.
ವಾರಾಣಸಿ ಸಿನಿಮಾವು ನಿರ್ದೇಶಕ ರಾಜಮೌಳಿ ಮತ್ತು ತೆಲುಗು ಸೂಪರ್‌ಸ್ಟಾರ್ ಮಹೇಶ್ ಬಾಬು ಸಂಯೋಜನೆಯ ಮೊದಲ ಸಿನಿಮಾವಾಗಿದೆ. ಮಹೇಶ್ ಬಾಬು ಅವರು ಸಿನಿಮಾದ ಪ್ರಮುಖ ಪಾತ್ರ ರುದ್ರನ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಈ ಸಿನಿಮಾ 2027ರ ಜನವರಿಯಲ್ಲಿ ಸಂಕ್ರಾಂತಿ ಹಬ್ಬದಂದು ವಿಶ್ವಾದ್ಯಂತ ಬಿಡುಗಡೆಯಾಗಲಿದೆ ಎಂದು ಸಿನಿಮಾ ತಂಡ ಮಾಹಿತಿ ನೀಡಿದೆ.
ರಾಮೋಜಿ ಫಿಲ್ಮ್ ಸಿಟಿಯಲ್ಲಿ ಆಯೋಜಿಸಿದ್ದ ‘ಗ್ಲೋಬ್ ಟ್ರಾಟರ್’ ಕಾರ್ಯಕ್ರಮದಲ್ಲಿ ಸಿನಿಮಾದ ಶೀರ್ಷಿಕೆ ಮತ್ತು ಟೀಸರ್ ಅನ್ನು ಬಿಡುಗಡೆ ಮಾಡಲಾಯಿತು. ಈ ಕಾರ್ಯಕ್ರಮ ವೀಕ್ಷಿಸಲು ಸುಮಾರು 50,000 ಅಭಿಮಾನಿಗಳು ಹಾಜರಿದ್ದರು. 130 x 100 ಅಡಿ ಬೃಹತ್ ಪರದೆಯ ಮೇಲೆ ವಾರಾಣಸಿ ಸಿನಿಮಾದ ಟೀಸರ್ ಅನ್ನು ಪ್ರದರ್ಶನ ಮಾಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.