ADVERTISEMENT

ವಿದ್ಯಾರ್ಥಿನಿ ಮಧು ಸಾವು: ತನಿಖೆಗೆ ಆಗ್ರಹಿಸಿದ ನಟ ದರ್ಶನ್

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2019, 8:46 IST
Last Updated 20 ಏಪ್ರಿಲ್ 2019, 8:46 IST
   

ಬೆಂಗಳೂರು: ರಾಯಚೂರಿನ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿ ಮಧು ಅವರ ಅನುಮಾನಾಸ್ಪದ ಸಾವಿನ ಪ್ರಕರಣದ ಬಗ್ಗೆ ತ್ವರಿತವಾಗಿ ಸೂಕ್ತ ತನಿಖೆ ನಡೆಸಬೇಕು ಎಂದು ಚಾಲೆಂಜಿಂಗ್ ಸ್ಟಾರ್‌ ದರ್ಶನ್‌ ಟ್ವಿಟರ್‌ನಲ್ಲಿ ಆಗ್ರಹಿಸಿದ್ದಾರೆ.

ಇಂಥ ಅಮಾನುಷ ಕೃತ್ಯವನ್ನು ಎಸಗಿರುವ ಕೀಚಕರಿಗೆ ಕಾನೂನುಬದ್ಧವಾಗಿ ತಕ್ಕ ಶಾಸ್ತಿಯಾಗಬೇಕು. ಅತ್ಯಾಚಾರ ಮತ್ತು ಕೊಲೆ ಕೃತ್ಯಕ್ಕೆ ಇನ್ನಷ್ಟು ಕಠಿಣವಾದ ಕಾನೂನು ನಮ್ಮ ದೇಶದಲ್ಲಿ ರೂಪುಗೊಳ್ಳಬೇಕು ಎಂದು ಟ್ವೀಟ್‌ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT