ADVERTISEMENT

Prem Direction Movie | ‘KD’ ಅಡ್ಡದಲ್ಲಿ ಸುದೀಪ್‌

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2025, 23:30 IST
Last Updated 15 ಸೆಪ್ಟೆಂಬರ್ 2025, 23:30 IST
<div class="paragraphs"><p>ಸುದೀಪ್‌, ಪ್ರೇಮ್‌ ಹಾಗೂ ಧ್ರುವ ಸರ್ಜಾ</p></div>

ಸುದೀಪ್‌, ಪ್ರೇಮ್‌ ಹಾಗೂ ಧ್ರುವ ಸರ್ಜಾ

   

2025ರ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ಪ್ರೇಮ್‌ ನಿರ್ದೇಶನದ, ಧ್ರುವ ಸರ್ಜಾ ನಟನೆಯ ‘KD’ ಸಿನಿಮಾದಲ್ಲಿ ನಟ ಸುದೀಪ್‌ ಪಾತ್ರವೊಂದನ್ನು ನಿರ್ವಹಿಸಿದ್ದಾರೆ. ಈ ಮೂಲಕ ಸಿನಿಮಾದ ಶೂಟಿಂಗ್‌ ಕೂಡಾ ಪೂರ್ಣಗೊಂಡಿದೆ. ‘ಶೀಘ್ರದಲ್ಲೇ ಸಿನಿಮಾ ತೆರೆಗೆ ಬರಲಿದೆ’ ಎಂದು ಪ್ರೇಮ್‌ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದ್ದಾರೆ.  

ಇತ್ತೀಚೆಗೆ ಹೈದರಾಬಾದ್‌ನಲ್ಲಿ ನಡೆದ ಸಿನಿಮಾದ ಶೂಟಿಂಗ್‌ನಲ್ಲಿ ಸುದೀಪ್‌ ಭಾಗವಹಿಸಿದ್ದಾರೆ. ಅತಿಥಿ ಪಾತ್ರದಲ್ಲಿ ಸುದೀಪ್‌ ಕಾಣಿಸಿಕೊಳ್ಳಲಿದ್ದು, ಅವರ ಪಾತ್ರದ ಬಗ್ಗೆ ಸದ್ಯದಲ್ಲೇ ಮಾಹಿತಿ ನೀಡಲಾಗುವುದು ಎಂದು ಚಿತ್ರತಂಡ ತಿಳಿಸಿದೆ. ಅಕ್ಟೋಬರ್‌ ಮಾಸಾಂತ್ಯದಲ್ಲಿ ಸಿನಿಮಾ ತೆರೆಗೆ ಬರುವ ಸಾಧ್ಯತೆ ಇದೆ. ಕಳೆದ ತಿಂಗಳಲ್ಲಿ ಹಂಗರಿ ರಾಜಧಾನಿ ಬುಡಾಪೆಸ್ಟ್‌ನಲ್ಲಿ ಚಿತ್ರದ ಹಿನ್ನೆಲೆ ಸಂಗೀತದ ಕೆಲಸವನ್ನು ಚಿತ್ರತಂಡ ನಡೆಸಿತ್ತು. 

ADVERTISEMENT

‘ಏಕ್‌ ಲವ್‌ ಯಾ’ ಸಿನಿಮಾ ನಂತರ ಪ್ರೇಮ್ ನಿರ್ದೇಶನದ ಪ್ಯಾನ್‌ ಇಂಡಿಯಾ ಚಿತ್ರ ಇದಾಗಿದ್ದು, ಧ್ರುವ ಸರ್ಜಾ, ರೀಷ್ಮಾ ನಾಣಯ್ಯ, ಸಂಜಯ್‌ ದತ್‌, ರವಿಚಂದ್ರನ್, ಶಿಲ್ಪಾ ಶೆಟ್ಟಿ, ರಮೇಶ್‌ ಅರವಿಂದ್‌ ಚಿತ್ರದ ತಾರಾಬಳಗದಲ್ಲಿದ್ದಾರೆ. ‘KD’–ಕಾಳಿದಾಸ ಸಿನಿಮಾವನ್ನು ಕೆವಿಎನ್‌ ಪ್ರೊಡಕ್ಷನ್ಸ್‌ ನಿರ್ಮಾಣ ಮಾಡಿದೆ. 1970-75ರ ಸಮಯದಲ್ಲಿ ನಡೆದ ನೈಜಘಟನೆ ಆಧಾರಿತ ಗ್ಯಾಂಗ್‌ಸ್ಟರ್ ಕಥೆ ಈ ಚಿತ್ರಲ್ಲಿದೆ. ಚಿತ್ರಕ್ಕಾಗಿ ಸುಮಾರು 180 ದಿನ ಚಿತ್ರೀಕರಣ ನಡೆಸಿದೆ ಚಿತ್ರತಂಡ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.