
ಪ್ರಜಾವಾಣಿ ವಾರ್ತೆ
ಬೆಂಗಳೂರು: ಸುದೀಪ್ ಅಭಿನಯದ ‘ಮಾರ್ಕ್’ ಚಿತ್ರ ತಂಡವು ಏರ್‌ಟೆಲ್ ಜತೆಗೆ ಒಪ್ಪಂದ ಮಾಡಿಕೊಂಡಿದೆ.
ಈ ಚಿತ್ರವು ಡಿಸೆಂಬರ್ 25ರಂದು ಕನ್ನಡ, ತಮಿಳು ಮತ್ತು ತೆಲುಗು ಭಾಷೆಯಲ್ಲಿ ಬಿಡುಗಡೆಯಾಗಲಿದೆ. ಒಪ್ಪಂದದ ಅನುಸಾರ ಏರ್‌ಟೆಲ್ ‘ಮಾರ್ಕ್ ಎಕ್ಸ್‌ಕ್ಲೂಸಿವ್ ಪ್ಯಾಕ್’ ಅನ್ನು ಪರಿಚಯಿಸಿದೆ. ಗ್ರಾಹಕರು ಹೊಸದಾಗಿ ಬಿಡುಗಡೆಯಾದ ‘9 ಸೀರೀಸ್’ ನಂಬರ್‌ಗಳಿರುವ ಸಿಮ್ ಕಾರ್ಡ್‌ಗಳನ್ನು ಪಡೆಯಬಹುದಾಗಿದೆ.
ಅಭಿಮಾನಿಗಳಿಗಾಗಿ ಒಂದು ವಿಶೇಷ ಸ್ಪರ್ಧೆಯನ್ನು ಏರ್ಪಡಿಸಲಾಗುತ್ತಿದ್ದು, ಇದರಲ್ಲಿ ಗೆಲ್ಲುವ
100 ಅದೃಷ್ಟಶಾಲಿಗಳಿಗೆ ‘ಮಾರ್ಕ್’ ಚಿತ್ರದ ಟಿಕೆಟ್‌ಗಳನ್ನು ಬಹುಮಾನವಾಗಿ ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.